ದೀಪಾವಳಿ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಯಲ್ಲಿ ದೀಪಗಳನ್ನು ಹಚ್ಚಿ ಕುಟುಂಬರವರೆಲ್ಲಾ ಸೇರಿ ಸಂತೋಷದಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗದ ತಮ್ಮ ತೋಟದ ಮನೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿ ಹಬ್ಬವನ್ನು ಆಚರಿಸಿದ್ದಾರೆ.
ಸಚಿವರು ಹಬ್ಬದ ಸಡಗರದಲ್ಲಿ ಕರುವಿಗೆ ಹೂವಿನ ಮಾಲೆ ಕಟ್ಟುತ್ತಿರುವ ದೃಶ್ಯವನ್ನು ನೋಡಬಹುದು. ಹೂವಿನ ಮಾಲೆಯಿಂದ ಕರುವನ್ನು ಸಿಂಗರಿಸುತ್ತಿದ್ದಾರೆ. ಹಸುವಿಗೆ ಅರಿಶಿಣ ಕುಂಕುಮ ಹಚ್ಚಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ.
ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.
ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.
ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.
Published On - 12:32 pm, Fri, 5 November 21