ಕುಂಭಮೇಳದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ: ಇಲ್ಲಿವೆ ಕಲರ್ ಫುಲ್ ಫೋಟೋಸ್

Updated on: Feb 09, 2025 | 5:55 PM

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭಾಗಿಯಾಗಿದ್ದಾರೆ. ಇಂದು (ಫೆಬ್ರವರಿ 09) ಕುಟುಂಬ ಸಮೇತರಾಗಿ ಮಹಾಕುಂಭಮೇಳದಲ್ಲಿ ಭಾಗಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್‌ರಾಜ್‌ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿಕೆಶಿ ದಂಪತಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.

1 / 6
144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು  ಭಾಗಿಯಾಗಿದ್ದು, ಇಂದು(ಫೆಬ್ರವರಿ 09) ಪತ್ನಿ ಉಷಾ ಅವರ ಜೊತೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

2 / 6
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಜೊತೆಯಲ್ಲೇ ಡಿಕೆಶಿ ದಂಪತಿ ಮಹಾಕುಂಭಮೇಳದಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು.

3 / 6
ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪೂಜ್ಯ ಮತ್ತು ಆಧ್ಯಾತ್ಮಿಕವಾಗಿ ಸಂಗಮವಾಗಿದೆ. ಹೀಗಾಗಿ ಇಲ್ಲಿ ಸ್ನಾನ ಮಾಡುವುದನ್ನು ಪುಣ್ಯಸ್ನಾನ ಎಂದು ಕರೆಯಲಾಗುತ್ತೆ. ಅದರಂತೆ ಡಿಕೆಶಿ ದಂಪತಿ ಸಹ ಗಂಗೆಗೆ ವಿಶೇಷ ಪೂಜೆ ಸಲ್ಲಿಸಿ ಪುಣ್ಯಸ್ನಾನ ಮಾಡಿದೆ.

4 / 6
ಗಂಗಾ, ಯಮುನಾ ಮತ್ತು ಸರಸ್ವತಿ ಎಂಬ ಮೂರು ನದಿಗಳ ಸಂಗಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ  ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.

5 / 6
ಇನ್ನು ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ಡಿಕೆಶಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದು,  ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ.

6 / 6
 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾಕುಂಭದಲ್ಲಿ ಪುಣ್ಯಸ್ನಾನ ಮಾಡಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕೆ ಮಾಡಿದ್ದರು. ಇದು ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಗಮನಸೆಳೆದಿದ್ದಾರೆ.

Published On - 5:53 pm, Sun, 9 February 25