- Kannada News Photo gallery DK Shivakumar Reacts about Election Officers checked his helicopter at dharmasthala
ಕೆಪಿಸಿಸಿ ಅಧ್ಯಕ್ಷ ಬಂದ ಹೆಲಿಕಾಪ್ಟರ್ ಇಂಚಿಂಚೂ ಪರಿಶೀಲಿಸಿದ ಅಧಿಕಾರಿಗಳು, ಫೋಟೋಗಳನ್ನ ಹರಿಬಿಟ್ಟ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ನಿನ್ನೆ(ಏಪ್ರಿಲ್ 23) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದರು. ಆ ವೇಳೆ ಪೈಲಟ್ ಹಾಗೂ ಚುನಾವಣಾಧಿಕಾರಿಗಳು ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೀಗ ಇದಕ್ಕೆ ಡಿಕೆ ಶಿವಕುಮಾರ್ ಫೋಟೋಗಳನ್ನು ಶೇರ್ ಮಾಡಿಕೊಂಡು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
Updated on:Apr 23, 2023 | 5:51 PM

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್ ತಪಾಸಣೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್ ಅನ್ನೇ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆ ಶಿವಕುಮಾರ್ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿನ್ನೆ(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು.

ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದರು. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು.
Published On - 5:44 pm, Sun, 23 April 23




