AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಡಿಕೆ ಶಿವಕುಮಾರ್​ ರಾಜ್ಯದ 25ನೇ ಸಿಎಂ ಆಗಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್ ಯುಗಾರಂಭವಾಗಿದೆ. ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಆಗಿ ಡಿಕೆ ಶಿವಕುಮಾರ್​ ಮತ್ತು ಡಿಸಿಎಂ ಆಗಿ ಡಾ. ಪರಮೇಶ್ವರ್ ಹಾಗೂ 13 ನಾಯಕರು ಸಚಿವ ಸ್ಥಾನದ ಗದ್ದುಗೆ ಏರಿದ್ದಾರೆ. ಹಾಗಾದರೆ ಅವರು ಯಾರು ಎಂಬ ಮಾಹಿತಿ ಇಲ್ಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Jun 03, 2026 | 6:24 PM

Share
ಕಾಂಗ್ರೆಸ್​ನ ಟ್ರಬಲ್ ಶೂಟರ್​, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್​​ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು.

1 / 10
ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್​​ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದರು.

2 / 10
ಕೆ.ಎಚ್. ಮುನಿಯಪ್ಪ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 74 ವರ್ಷದ ಕೆ.ಹೆಚ್.ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಮತ್ತೊಮ್ಮೆ ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

3 / 10
ಇನ್ನು 76 ವರ್ಷದ ಕೆ.ಜೆ.ಜಾರ್ಜ್ ದೇವರ ಹೆಸರಿನಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿರುವ ಕೆ.ಜೆ.ಜಾರ್ಜ್ ಲೋಕಭವನದ ಗಾಜಿನಮನೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

4 / 10
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರಾಗಿರುವ ಎಂ.ಬಿ.ಪಾಟೀಲ್​, ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಸಿದ್ದೇಶ್ವರಶ್ರೀ ಹೆಸರಿನಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

5 / 10
ಬಿಟಿಎಂ ಲೇಔಟ್ ಶಾಸಕ 72 ವರ್ಷದ ರಾಮಲಿಂಗಾರೆಡ್ಡಿಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಿದೆ.

6 / 10
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಶಾಸಕರಾಗಿರುವ ಸತೀಶ್ ಜಾರಕಿಹೊಳಿ ಸಂಪುಟ ದರ್ಜೆ ಸಚಿವರಾಗಿ ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದರು.

7 / 10
53 ವರ್ಷದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಕೂಡ ಡಿಕೆ ಶಿವಕುಮಾರ್​ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡರು. ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು.

8 / 10
ಇನ್ನು ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರಿಸಿದ್ದು, ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಅಧಿಕಾರ ವಹಿಸಿಕೊಂಡರು.

9 / 10
ಈಶ್ವರ್ ಖಂಡ್ರೆ ಚನ್ನಬಸವ ಪಟ್ಟ ದೇವರ ಹೆಸರಿನಲ್ಲಿ ಮಂತ್ರಿಗಿರಿ ಪಡೆದರೆ, ಭೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಸಚಿವ ಸ್ಥಾನದ ಗದ್ದುಗೆಗೆ ಏರಿದರು.

10 / 10

Published On - 6:22 pm, Wed, 3 June 26

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್