AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಾದ ಡಾಲಿ; ಧನಂಜಯ್-ಧನ್ಯತಾ ದಂಪತಿಯಿಂದ ಸಿಹಿ ಸುದ್ದಿ

ಡಾಲಿ ಧನಂಜಯ ಅವರ ಬಾಳಲ್ಲಿ ಎಲ್ಲವೂ ಒಳ್ಳೆಯದೇ ಆಗುತ್ತಿದೆ. ಕಳೆದ ವರ್ಷ ಅವರಿಗೆ ವಿವಾಹ ಆಯಿತು. ಈ ವರ್ಷ ಅವರ ನಿರ್ಮಾಣದ ಜೆರಾಕ್ಸ್ ಸರಣಿ ಯಶಸ್ಸು ಕಂಡಿತು. ಈಗ ಅವರಿಗೆ ಮಗು ಜನಿಸಿದೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಅವರಿಗೆ ಶುಭಾಶಯ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:May 02, 2026 | 8:38 AM

Share
ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಪಾಲಕರಾಗಲಿರುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ಈ ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ.

1 / 6
ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

2 / 6
ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮಗುವಿನ ಮುದ್ದಾದ ಮುಖ ನೋಡಲು ಫ್ಯಾನ್ಸ್ ಕಾದಿದ್ದಾರೆ.

3 / 6
ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಅವರ ಮಧ್ಯೆ ಪ್ರೀತಿ ಮೂಡಿ, ಇಬ್ಬರೂ ಹಿರಿಯರ ಸಮ್ಮತಿಯೊಂದಿಗೆ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು  ಮಗುವನ್ನು ಸ್ವಾಗತಿಸಿದೆ.

4 / 6
ಸದ್ಯ ತಾಯಿ ಧನ್ಯತಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಮಗುವಿನ ಕೈಗಳ ಫೋಟೋ ಮಾತ್ರ ಹಂಚಿಕೊಂಡಿರುವ ‘ಡಾಲಿ’, ಮುಂದಿನ ದಿನಗಳಲ್ಲಿ ಮಗುವಿನ ಮುಖವನ್ನು ಪರಿಚಯಿಸುವ ಸಾಧ್ಯತೆಯಿದೆ.

5 / 6
ವೃತ್ತಿಜೀವನದಲ್ಲೂ ಧನಂಜಯ್ ಅವರಿಗೆ ಇದು ಯಶಸ್ಸಿನ ಸಮಯ. ಅವರು ನಿರ್ಮಿಸಿರುವ ‘ಜೆರಾಕ್ಸ್’ ವೆಬ್ ಸರಣಿ ಇತ್ತೀಚೆಗಷ್ಟೇ ಜೀ5ನಲ್ಲಿ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದೆ. ಇದರ ಬೆನ್ನಲ್ಲೇ ವೈಯಕ್ತಿಕ ಜೀವನದಲ್ಲೂ ಒಳ್ಳೆಯದೇ ಆಗಿದ್ದು ಧನಂಜಯ್ ಅವರ ಬಾಳಲ್ಲಿ ಹೊಸ ಅಧ್ಯಾಯ ಶುರುವಾಗಿದೆ.

6 / 6

Published On - 8:27 am, Sat, 2 May 26

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು

3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ

ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ

ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ