AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black coffee: ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಕಾಫಿ ನಮ್ಮ ಅತ್ಯಂತ ಪ್ರಿಯವಾದ ಒಂದು ಪಾನೀಯ. ಈಗಿನ ಕಾಲದಲ್ಲಿ ಪ್ರತಿಯೊಬ್ಬರಿಗೂ ಕಾಫಿ ಕುಡಿಯುವ ಅಭ್ಯಾಸ ಇದ್ದೇ ಇರುತ್ತದೆ. ಇನ್ನು ಕೆಲಸದ ಮಧ್ಯೆ ಸಾಕಷ್ಟು ಮಾನಸಿಕ ಒತ್ತಡ ಇರುವ ಸಮಯದಲ್ಲಿ ನಾವು ಒಂದು ಕಪ್ ಕಾಫಿ ಕುಡಿಯುವುದರಿಂದ ನಮ್ಮ ಮನಸ್ಸಿಗೆ ಆ ಕ್ಷಣ ಖುಷಿ, ನೆಮ್ಮದಿ ಸಿಗುತ್ತದೆ ಎಂಬುದು ಕಾಫಿ ಕುಡಿಯುವುದರ ಹಿಂದಿನ ಉದ್ದೇಶ. ಆದರೆ ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯುವುದು ಒಳ್ಳೆಯದೇ? ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 02, 2025 | 12:17 PM

ಕೆಲವರಿಗೆ ಬೆಳಗಿನ ಸಮಯದಲ್ಲಿ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ ಇದು ಒಳ್ಳೆಯದೋ ಅಥವಾ ಕೆಟ್ಟದ್ದೋ? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ತೊಂದರೆಗಳಾಗಬಹುದು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಏಕೆಂದರೆ ಖಾಲಿ ಹೊಟ್ಟೆಗೆ ಕೆಫೀನ್ ಅಂಶ ಹೋದಾಗ ಯಾವ ರೀತಿ ಸಮಸ್ಯೆಗಳಾಗಬಹುದು ಎಂಬುದನ್ನು ತಿಳಿಯುವುದು ಬಹಳ ಅವಶ್ಯಕವಾಗಿದೆ.

1 / 5
ಸಂಶೋಧನೆ ಹೇಳುವ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಹೆಚ್ಚು ಆಮ್ಲ ಉತ್ಪತ್ತಿಯಾಗುತ್ತದೆ. ಅದಲ್ಲದೆ ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಹೊಟ್ಟೆಯಲ್ಲಿ ಉರಿ, ಕರುಳಿನ ಅಸ್ವಸ್ಥತೆಗಳು, ಎದೆಯುರಿ, ಹೊಟ್ಟೆಯಲ್ಲಿ ಹುಣ್ಣು, ವಾಕರಿಕೆ, ಅಜೀರ್ಣತೆ ಇತ್ಯಾದಿ ಗ್ಯಾಸ್ಟಿಕ್ ಸಂಬಂಧಿತ ಸಮಸ್ಯೆಗಳು ಎದುರಾಗಬಹುದು.

2 / 5
ಬ್ಲ್ಯಾಕ್ ಕಾಫಿಯನ್ನು ಕೆಲವರು ಹೆಚ್ಚಾಗಿ ಇಷ್ಟ ಪಡುತ್ತಾರೆ ಆದರೆ ಇದರಲ್ಲಿ ಕೆಫೀನ್ ಅಂಶ ಇರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲಿಯೂ ಇದು ಹೊಟ್ಟೆ ಉಬ್ಬರ, ಹೊಟ್ಟೆಯ ಅಸ್ವಸ್ಥತೆ ಮತ್ತು ಬಿಗಿಯಾದ ಭಾವನೆಯಂತಹ ಅಜೀರ್ಣ ರೋಗಲಕ್ಷಣಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

3 / 5
ಜೀರ್ಣಕಾರಿ ಸಮಸ್ಯೆ ಇರುವವರು ಅಂದರೆ  ಗ್ಯಾಸ್ಟ್ರೈಟಿಸ್, ಅಲ್ಸರ್ ಅಥವಾ ಆಸಿಡ್ ರಿಫ್ಲಕ್ಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯಬಾರದು. ಅದರಲ್ಲಿಯೂ ಗರ್ಭಿಣಿ ಅಥವಾ ಹಾಲುಣಿಸುವ ತಾಯಂದಿರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿಯನ್ನು ಸೇವನೆ ಮಾಡುವುದು ಒಳ್ಳೆಯದಲ್ಲ.

4 / 5
ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ನಡುಕ, ಹೃದಯ ಬಡಿತ, ತಲೆನೋವು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಬ್ಲ್ಯಾಕ್ ಕಾಫಿಯ ನಿದ್ರೆಯ ಮೇಲೂ ಪರಿಣಾಮ ಬೀರಬಹುದು. ಅದರಲ್ಲೂ ಮಲಗುವ ಮುನ್ನ ಬ್ಲ್ಯಾಕ್ ಕಾಫಿ ಕುಡಿಯುವುದನ್ನು ತಪ್ಪಿಸಿ. ಜೊತೆಗೆ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ, ಬ್ಲ್ಯಾಕ್ ಕಾಫಿ ಕುಡಿಯುವುದನ್ನು ನಿಲ್ಲಿಸುವುದೇ ಉತ್ತಮ. ಇದು ನಿಮ್ಮ ಆರೋಗ್ಯ ಹದಗೆಡಿಸಬಹುದು.

5 / 5
Follow us
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್

ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ

ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ

ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್

Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ

ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ