ಕನ್ಯಾ ರಾಶಿ (Virgo): ಕುಂಡಲಿಯ 8 ನೇ ಪಾದದಲ್ಲಿ ಸೂರ್ಯಗ್ರಹಣವು ಕನ್ಯಾ ರಾಶಿಯ ಜಾತಕರಿಗೆ ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ನೀವು ಕೋಪಗೊಳ್ಳುತ್ತೀರಿ ಮತ್ತು ತಲೆನೋವಿನಂತಹ ಸಮಸ್ಯೆಗಳಿಂದ ಬಳಲುತ್ತೀರಿ. ಕೆಲವು ವಿಷಯಗಳ ಮೇಲೆ ಕೇಂದ್ರೀಕರಿಸುವುದು ಪ್ರಯೋಜನಕಾರಿಯಾಗಿದೆ. ಈ ಸಂದರ್ಭದಲ್ಲಿ, ನೀವು ನಿಮ್ಮ ಮುಂಗೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳದಿದ್ದರೆ, ಸಮಸ್ಯೆಗಳು ಹೆಚ್ಚು ಜಟಿಲವಾಗುತ್ತವೆ.