ದುನಿಯಾ ವಿಜಯ್ ತಮಿಳು ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು

|

Updated on: Mar 07, 2025 | 2:06 PM

Duniya Vijay: ದುನಿಯಾ ವಿಜಯ್ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ. ದುನಿಯಾ ವಿಜಯ್ ನಟಿಸಲಿರುವ ಮೊದಲ ತಮಿಳು ಸಿನಿಮಾದ ಮುಹೂರ್ತ ನಿನ್ನೆಯಷ್ಟೆ ಚೆನ್ನೈನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ದುನಿಯಾ ವಿಜಯ್ ಸಹ ಮುಹೂರ್ತದಲ್ಲಿ ಹಾಜರಿದ್ದರು. ಇಲ್ಲಿವೆ ನೋಡಿ ಸಿನಿಮಾದ ಮುಹೂರ್ತದ ಚಿತ್ರಗಳು.

1 / 6
ಕನ್ನಡದ ನಟ, ನಿರ್ದೇಶಕ ದುನಿಯಾ ವಿಜಯ್​, ಪರಭಾಷೆಗಳಲ್ಲಿಯೂ ಬೇಡಿಕೆ ಹೊಂದಿದ್ದಾರೆ. ಕೆಲ ವರ್ಷಗಳ ಹಿಂದಷ್ಟೆ ಅವರು ತೆಲುಗಿನಲ್ಲಿ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ನಟನೆಯ ಸಿನಿಮಾ ಒಂದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಆ ಪಾತ್ರಕ್ಕೆ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು.

2 / 6
ಇದೀಗ ದುನಿಯಾ ವಿಜಯ್ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ. ದುನಿಯಾ ವಿಜಯ್ ನಟಿಸಲಿರುವ ಮೊದಲ ತಮಿಳು ಸಿನಿಮಾದ ಮುಹೂರ್ತ ನಿನ್ನೆಯಷ್ಟೆ ಚೆನ್ನೈನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ದುನಿಯಾ ವಿಜಯ್ ಸಹ ಮುಹೂರ್ತದಲ್ಲಿ ಹಾಜರಿದ್ದರು.

3 / 6
‘ಮೂಕುತ್ತಿ ಅಮ್ಮನ್ 2’ ಸಿನಿಮಾ ಭಾರಿ ಬಜೆಟ್ ಸಿನಿಮಾ ಆಗಿದ್ದು ಸಿನಿಮಾಕ್ಕೆ 100 ಕೋಟಿ ಬಜೆಟ್ ಅನ್ನು ನಿರ್ಮಾಪಕರು ತೊಡಗಿಸಿದ್ದಾರೆ. ಸಿನಿಮಾವು ದೇವರು ಮತ್ತು ರಾಕ್ಷಸರ ನಡುವಿನ ಹೋರಾಟದ ಕತೆಯನ್ನು ಒಳಗೊಂಡಿದೆಯಂತೆ.

4 / 6
ದುನಿಯಾ ವಿಜಯ್ ನಟಿಸುತ್ತಿರುವ ಸಿನಿಮಾದಲ್ಲಿ ನಯನತಾರಾ, ಮೀನಾ, ಖುಷ್ಬು ಸುಂದರ್, ಯೋಗಿ ಬಾಬು, ಅವಂತಿಕಾ ಇನ್ನೂ ಕೆಲವು ಜನಪ್ರಿಯ ನಟ, ನಟಿಯರು ನಟಿಸುತ್ತಿದ್ದಾರೆ. ಸಿನಿಮಾ ನಿರ್ದೇಶನವನ್ನು ಸುಂದರ್ ಸಿ ಅವರು ಮಾಡುತ್ತಿದ್ದಾರೆ.

5 / 6
2020 ರಲ್ಲಿ ಬಿಡುಗಡೆ ಆಗಿದ್ದ ‘ಮೂಕುತಿ ಅಮ್ಮನ್’ ಸಿನಿಮಾದ ಮುಂದುವರೆದ ಭಾಗ ‘ಮೂಕುತ್ತಿ ಅಮ್ಮನ್ 2’ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ದೇವಿಯ ಪಾತ್ರದಲ್ಲಿ ನಯನತಾರಾ ನಟಿಸಲಿದ್ದಾರೆ.

6 / 6
‘ಮೂಕುತ್ತಿ ಅಮ್ಮನ್’ ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದಲ್ಲಿ ಸಾಕಷ್ಟು ಗ್ರಾಫಿಕ್ಸ್ ಬಳಕೆ ಸಹ ಇರಲಿದ್ದು, ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭ ಆಗಿದೆ.