AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Movie: ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಚಿತ್ರದ ಸೆಟ್​ಗೆ ಸಚಿವ ಮಧು ಬಂಗಾರಪ್ಪ ಭೇಟಿ; ಇಲ್ಲಿದೆ ಫೋಟೋ ಗ್ಯಾಲರಿ

Madhu Bangarappa: ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Jun 03, 2023 | 7:00 AM

Share
‘ಘೋಸ್ಟ್​’ ಚಿತ್ರವು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಶೂಟಿಂಗ್​ ಭರದಿಂದ ಸಾಗುತ್ತಿದೆ.

‘ಘೋಸ್ಟ್​’ ಚಿತ್ರವು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಶೂಟಿಂಗ್​ ಭರದಿಂದ ಸಾಗುತ್ತಿದೆ.

1 / 5
ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್. ನಿರ್ಮಿಸುತ್ತಿರುವ ‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆ ಹಿಂದೆ ಕೆಲಸ ಮಾಡುತ್ತಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್. ನಿರ್ಮಿಸುತ್ತಿರುವ ‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆ ಹಿಂದೆ ಕೆಲಸ ಮಾಡುತ್ತಿದ್ದಾರೆ.

2 / 5
‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದೆ. ವಿಶೇಷ ದೃಶ್ಯಗಳಿಗಾಗಿ ಅದ್ದೂರಿ ಸೆಟ್ ಹಾಕಲಾಗಿದೆ.

‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದೆ. ವಿಶೇಷ ದೃಶ್ಯಗಳಿಗಾಗಿ ಅದ್ದೂರಿ ಸೆಟ್ ಹಾಕಲಾಗಿದೆ.

3 / 5
ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

4 / 5
ಶಿವರಾಜ್​ಕುಮಾರ್​ ಮತ್ತು ಅವರ ಪತ್ನಿ ಗೀತಾ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಈಗ ಮಧು ಶಿಕ್ಷಣ ಸಚಿವರಾಗಿರುವುದು ಶಿವಣ್ಣ ಅವರ ಕುಟುಂಬಕ್ಕೆ ಸಂತಸ ತಂದಿದೆ.

ಶಿವರಾಜ್​ಕುಮಾರ್​ ಮತ್ತು ಅವರ ಪತ್ನಿ ಗೀತಾ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಈಗ ಮಧು ಶಿಕ್ಷಣ ಸಚಿವರಾಗಿರುವುದು ಶಿವಣ್ಣ ಅವರ ಕುಟುಂಬಕ್ಕೆ ಸಂತಸ ತಂದಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us