ಸ್ವಯಂ ನಿವೃತ್ತಿ ಪಡೆದಿದ್ದ IPS ಭಾಸ್ಕರ್ ರಾವ್ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ
TV9 Web | Updated By: Digi Tech Desk
Updated on:
Apr 04, 2022 | 12:10 PM
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.
1 / 5
ದೆಹಲಿ: ನಿವೃತ್ತ IPS ಅಧಿಕಾರಿ, ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿ ಆಗಿದ್ದ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
2 / 5
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು. ಆಪ್ಗೆ ಸೇರ್ಪಡೆಗೊಂಡ ಬಳಿಕ ಭಾಸ್ಕರ್ ರಾವ್ ಅರವಿಂದ್ ಕೇಜ್ರೀವಾಲ್ಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ.
3 / 5
ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದು ಇಂದಿನ ಸಮಾರಂಭದ ಗ್ರೂಪ್ ಫೋಟೊ.
4 / 5
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಬಸವ ಅಂಡ್ ಹ್ಯೂಮನ್ ರೈಟ್ಸ್ ಎಂಬ ಪುಸ್ತಕವನ್ನು ಅರವಿಂದ್ ಕೇಜ್ರೀವಾಲ್ಗೆ ನೀಡಲಾಯಿತು.
5 / 5
ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್ಗೆ ಸೇರ್ಪಡೆಗೊಂಡಿದ್ದಾರೆ.
Published On - 11:45 am, Mon, 4 April 22