AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಅರಿಶಿನ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ

ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಜಠರಗರುಳಿನಲ್ಲಿ ನೋವು, ರಕ್ತ ತೆಳುವಾಗುವುದು ಮತ್ತು ಯಕೃತ್ತಿನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 20, 2024 | 12:54 PM

Share
ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಜಠರಗರುಳಿನಲ್ಲಿ ನೋವು, ರಕ್ತ ತೆಳುವಾಗುವುದು ಮತ್ತು ಯಕೃತ್ತಿನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಜಠರಗರುಳಿನಲ್ಲಿ ನೋವು, ರಕ್ತ ತೆಳುವಾಗುವುದು ಮತ್ತು ಯಕೃತ್ತಿನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

1 / 6
ಅತಿಯಾದ ಅರಿಶಿನ ಸೇವನೆ ಮಾಡುವುದರಿಂದ ಕಿಬ್ಬೊಟ್ಟೆಯ ಹಿಗ್ಗುವಿಕೆ, ಮಲಬದ್ಧತೆ, ಅತಿಸಾರ, ಅಜೀರ್ಣ, ಗ್ಯಾಸ್, ಆಸಿಡ್ ರಿಫ್ಲಕ್ಸ್ ಮತ್ತು ಹಳದಿ ಮಲದಂತಹ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಡಚಣೆಗೆ ಕಾರಣವಾಗಬಹುದು.

2 / 6
ಕೂದಲಿನ ಬೆಳವಣಿಗೆಗೆ ಮತ್ತು ಸುಂದರ ಚರ್ಮವನ್ನು ಕಾಪಾಡಿಕೊಳ್ಳಲು ಅರಿಶಿನವನ್ನು ಬಳೆಕೆ ಮಾಡಲಾಗುತ್ತದೆ. ಆದರೆ ಇದು ಹೆಚ್ಚಾಗಿ ಚರ್ಮದ ದದ್ದುಗಳಿಗೆ ಕಾರಣವಾಗುತ್ತದೆ. ಅರಿಶಿನವನ್ನು ಬಳಕೆ ಮಾಡಿರುವ ಉತ್ಪನ್ನಗಳು ಅತಿಯಾಗಿ ಬಳಸುವುದರಿಂದ ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಇದು ಕೆಲವರಲ್ಲಿ ಚರ್ಮದ ಅಲರ್ಜಿಗೆ ಕಾರಣವಾಗಬಹುದು.

3 / 6
ಅರಿಶಿನವು ರಕ್ತವನ್ನು ತೆಳುಗೊಳಿಸುವ ಗುಣಗಳನ್ನು ಹೊಂದಿದೆ. ಇದು ರಕ್ತ ಹೆಪ್ಪುಗಟ್ಟಲು ಮತ್ತು ರಕ್ತ ಪರಿಚಲನೆಯನ್ನು ಕ್ರಮಬದ್ಧಗೊಳಿಸಲು ಸಹಕಾರಿಯಾಗಿದೆ. ಆದರೆ ಇದು ಹೆಚ್ಚಿದ ರಕ್ತಸ್ರಾವದ ಅಪಾಯವನ್ನು ಹೆಚ್ಚಿಸುತ್ತದೆ. ಮೂಗು ಅಥವಾ ಒಸಡಿನಲ್ಲಿ ರಕ್ತಸ್ರಾವವಾಗುವುದು ಮತ್ತು ಮಲ ಅಥವಾ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಅರಿಶಿನ ಸೇವನೆಯ ಅಡ್ಡಪರಿಣಾಮಗಳಾಗಿವೆ.

4 / 6
ಟೈಪ್ 2 ಡಯಾಬಿಟಿಸ್ ಇರುವವರಿಗೆ, ಅರಿಶಿನವು ದೇಹದಲ್ಲಿ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಅತಿಯಾದ ಅರಿಶಿನವು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಕುಸಿತಕ್ಕೆ ಕಾರಣವಾಗಬಹುದು. ಹಾಗಾಗಿ ಅಧ್ಯಯನಗಳ ಪ್ರಕಾರ, ಪ್ರತಿದಿನ 3 ಗ್ರಾಂ ಅರಿಶಿನದ ಪ್ರಮಾಣ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ.

5 / 6
ಅತಿಯಾದ ಅರಿಶಿನ ಸೇವನೆ ಮಾಡಿದರೆ ಯಕೃತ್ತಿಗೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ. ಕಾಮಾಲೆ, ಕಿಬ್ಬೊಟ್ಟೆ ನೋವು, ವಾಕರಿಕೆ ಹಾನಿಗೊಳಗಾದ ಯಕೃತ್ತಿನ ಕೆಲವು ಲಕ್ಷಣಗಳಾಗಿವೆ. ಹಾಗಾಗಿ ಈ ರೀತಿ ಲಕ್ಷಣ ಕಂಡು ಬಂದರೆ ಮೊದಲು ವೈದ್ಯರನ್ನು ಸಂಪರ್ಕಿಸಿ.

6 / 6
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!