- Kannada News Photo gallery Excited to build Sky Line in Bangaluru: DK Shivakumar on New York's "The Edge" Sky Deck, Karnataka news in kannada
ಬೆಂಗಳೂರಿನಲ್ಲಿ ಸ್ಕೈ ಲೈನ್ ನಿರ್ಮಿಸಲು ಉತ್ಸುಕನಾಗಿದ್ದೇನೆ: ನ್ಯೂಯಾರ್ಕ್ನ “ದ ಎಡ್ಜ್” ಸ್ಕೈ ಡೆಕ್ ವೀಕ್ಷಿಸಿದ ಡಿಕೆ ಶಿವಕುಮಾರ್
ಅಮೆರಿಕ ಪ್ರವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಈ ವೇಳೆ ತಮ್ಮ ಪತ್ನಿ ಉಷಾ ಅವರ ಜತೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದ ಎಡ್ಜ್" ಸ್ಕೈ ಡೆಕ್ಗೆ ಭೇಟಿ ಮಾಡಿ ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದ್ದಾರೆ.
Updated on: Sep 15, 2024 | 6:22 PM

ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡುವ ಕನಸು ಕಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದ ಎಡ್ಜ್" ಸ್ಕೈ ಡೆಕ್ಗೆ ಭೇಟಿ ಮಾಡಿ ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದ್ದಾರೆ.

ಪತ್ನಿ ಉಷಾ ಅವರ ಜತೆ ಸ್ಕೈ ಡೆಕ್ ವೀಕ್ಷಿಸಿದ ಡಿಕೆ ಶಿವಕುಮಾರ್ ಅವರು ಅದರ ಮನೋಹರ ನೋಟವನ್ನು ಕಣ್ತುಂಬಿಕೊಂಡಿದ್ದಾರೆ. ಹಡ್ಸನ್ ಯಾರ್ಡ್ಸ್ 30 ವೆಸ್ಟರ್ನ್ ಹೆಮಿಸ್ಫರ್ನಲ್ಲಿರುವ ಕಟ್ಟಡದ 100 ನೇ ಮಹಡಿಯಲ್ಲಿ 7500 ಚದರಡಿಯ ಈ ಡೆಕ್ ಅನ್ನು ವೀಕ್ಷಣೆ ಮಾಡಿದ್ದಾರೆ. ಈ ಡೆಕ್ ಫ್ಲೋರ್ನಿಂದ ಹಿಡಿದು ಸೀಲಿಂಗ್ವರೆಗೂ ಪಾರದರ್ಶಕ ಗಾಜಿನಿಂದ ಕೂಡಿದ್ದು, ಇದು ನ್ಯೂಯಾರ್ಕ್ ನಗರದ ವಿಹಂಗಮ ನೋಟಕ್ಕೆ ವೇದಿಕೆಯಾಗಿದೆ.

ಬೆಂಗಳೂರಿನ ಸ್ಕೈ ಡೆಕ್ ನಿರ್ಮಾಣ ವಿಚಾರವಾಗಿ ಡಿಕೆ ಶಿವಕುಮಾರ್ ಖ್ಯಾತ ವಾಸ್ತುಶಿಲ್ಪ ವಿನ್ಯಾಸಗಾರ ಡಾ. ಬಾಬು ಕೀಲಾರ ಅವರೊಂದಿಗೆ ಚರ್ಚಿಸಿದರು. ಈ ಪ್ರವಾಸದಲ್ಲಿ ಅವರು ಕೀಲಾರ ಅವರ ಜತೆಗೂಡಿ ಹಡ್ಸನ್ ಯಾರ್ಡ್ ಸೇರಿದಂತೆ ಹಲವು ಸ್ಕೈ ಡೆಕ್ ಗಗನಚುಂಬಿ ಕಟ್ಟಡಗಳ ವೀಕ್ಷಣೆ ಮಾಡಿದ್ದಾರೆ.

ನ್ಯೂಯಾರ್ಕಿನ ವಿಶ್ವ ವಾಣಿಜ್ಯ ಕಟ್ಟಡ, ಚೀನಾದ ಶಾಂಘೈ ಟವರ್, ದುಬೈನ ಬುರ್ಜ್ ಖಲೀಫಾದ ವಿನ್ಯಾಸ ಮಾಡಿರುವ ಹೆಚ್ಓಕೆಯ ವಾಸ್ತುಶಿಲ್ಪ ವಿನ್ಯಾಸಗಾರ ಕೆನ್ನೆತ್ ಡ್ರಕರ್ ಅವರ ಜತೆ ಡಿಸಿಎಂ ಚರ್ಚೆ ಮಾಡಿದ್ದಾರೆ.

ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ "ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸುಸ್ಥಿರ ಆಲೋಚನೆಗಳನ್ನು ಒಟ್ಟುಗೂಡಿಸಿದರೆ ಬೆಂಗಳೂರಿನ ಸ್ಕೈ ಲೈನ್ಗೆ ಹೊಸ ವ್ಯಾಖ್ಯಾನ ನೀಡುವುದರ ಜೊತೆಗೆ ನಗರಾಭಿವೃದ್ಧಿಯ ಗುಣಮಟ್ಟವನ್ನು ಹೆಚ್ಚಿಸಲಿದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.









