Updated on: Oct 13, 2022 | 8:00 AM
ಮಕ್ಕಳನ್ನು ಆರೋಗ್ಯವಾಗಿಡಲು ನಾವು ಅವರ ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇವೆ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ನಾವು ಇಲ್ಲಿ ತಿಳಿಸಿದ್ದೇವೆ ನೋಡಿ.
ನೆಲ್ಲಿಕಾಯಿ: ನೆಲ್ಲಿಕಾಯಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ದೃಷ್ಟಿಗೆ ತುಂಬಾ ಒಳ್ಳೆಯದು. ಮಕ್ಕಳಿಗೆ ನಿಯಮಿತವಾಗಿ ತಿನ್ನಿಸುವುದರಿಂದ ಅವರ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.
ಟೊಮ್ಯಾಟೋ: ಟೊಮ್ಯಾಟೋ ಬಹುತೇಕ ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಟೊಮೆಟೊದಲ್ಲಿರುವ ವಿಟಮಿನ್ ಎ ಮತ್ತು ಸಿ ಮಕ್ಕಳ ದೃಷ್ಟಿಯನ್ನು ಹೆಚ್ಚಿಸಲು ಮತ್ತು ಅವರ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ಸಿಹಿಗೆಣಸು: ಸಿಹಿಗೆಣಸಿನಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿಯನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಿಹಿಗೆಣಸಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್: ಕಾರ್ಬೋಹೈಡ್ರೇಟ್, ಫೈಬರ್, ಪ್ರೋಟೀನ್, ವಿಟಮಿನ್ ಎ ಮತ್ತು ವಿಟಮಿನ್ ಕೆ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.