
‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ನಿರ್ಮಾಣ ಆಗುತ್ತಿರುವ ಹನ್ನೆರಡನೇ ಚಿತ್ರ ಇದು.

ಮಲಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ‘ಲೂಸಿಯಾ’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಫಹಾದ್ ಫಾಸಿಲ್ ಹಾಗೂ ಅಪರ್ಣಾ ಬಾಲಮುರಳಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಲಿದ್ದಾರೆ.

‘ಧೂಮಂ’ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು

‘ಕೆಜಿಎಫ್’ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ‘ಧೂಮಂ’ ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರತಂಡದ ಸದಸ್ಯರ ಜೊತೆ ಅವರು ಮಾತನಾಡಿದರು. ನವೆಂಬರ್ ತಿಂಗಳಿನಿಂದ ‘ಧೂಮಂ’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

‘ಧೂಮಂ’ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ ಮಾಡಲಿದ್ದಾರೆ. ಈಗಾಗಲೇ ಟೈಟಲ್ ಪೋಸ್ಟರ್ ಗಮನ ಸೆಳೆಯುತ್ತಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
Published On - 6:09 pm, Sun, 9 October 22