ಅನುಶ್ರೀ-ರೋಷನ್ ವಿವಾಹಕ್ಕೆ ಬಂದ ಫ್ಯಾನ್ಸ್​ಗೆ ಭಾರೀ ನಿರಾಸೆ; ನಡೆದಿದ್ದೇನು?

Updated on: Aug 28, 2025 | 10:32 AM

Anushree Wedding Venue: ಅನುಶ್ರೀ ಅವರು ತಮ್ಮ ಮದುವೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ, ಅವರ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಇದರಲ್ಲಿ ರೋಷನ್ ಹೆಸರು ಇದೆ. ರೋಷನ್ ಕೊಡಗು ಮೂಲದ ಉದ್ಯಮಿ ಎನ್ನಲಾಗಿದೆ. ಅನುಶ್ರೀ ಹಾಗೂ ರೋಷನ್ ಅವರದ್ದು ಲವ್ ಮ್ಯಾರೇಜ್.

1 / 5
ಆ್ಯಂಕರ್ ಅನುಶ್ರೀ ಅವರು ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಇಂದು (ಆಗಸ್ಟ್ 28) ವಿವಾಹ ಆಗುತ್ತಿದ್ದಾರೆ. ಇನ್ನು ಕೆಲವೇ ಸಮಯದಲ್ಲಿ ಈ ಮದುವೆ ಅದ್ದೂರಿಯಾಗಿ ನೆರವೇರಲಿದೆ. ಇವರ ಮದುವೆ ನೋಡಲು ಫ್ಯಾನ್ಸ್ ಕೂಡ ಆಗಮಿಸಿದ್ದರು.

2 / 5
ಅನುಶ್ರೀ ಅವರ ವಿವಾಹ ಬೆಂಗಳೂರಿನ ಹೊರ ವಲಯದಲ್ಲಿ ಇರುವ ಕಗ್ಗಲಿಪುರದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದೆ. ಈ ವಿಚಾರ ತಿಳಿದ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಆದರೆ, ಅಭಿಮಾನಿಗಳಿಗೆ ಒಳಗೆ ಎಂಟ್ರಿ ನೀಡಲಾಗುತ್ತಿಲ್ಲ.

3 / 5
ಅನುಶ್ರೀ ವಿವಾಹಕ್ಕೆ ಆಮಂತ್ರಣ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹೀಗಾಗಿ, ಅಭಿಮಾನಿಗಳನ್ನು ಆರಂಭದಲ್ಲೇ ತಡೆದು ಕಳುಹಿಸಲಾಗುತ್ತಿದೆ. ಇದರಿಂದ ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಅವರು ಅಸಮಾಧಾನ ಹೊರಹಾಕುತ್ತಿದ್ದಾರೆ.

4 / 5
‘ಅನುಶ್ರೀ ಹೆಸರು ಮಾಡೋಕೆ ಫ್ಯಾನ್ಸ್ ಕಾರಣ. ಇವತ್ತು ನಮನ್ನೆ ಮದುವೆ ಮನೆಗೆ ಬಿಟ್ಟಿಲ್ಲ’ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡು ಹೊರ ಹೋಗುತ್ತಿದ್ದಾರೆ.

5 / 5
ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅಭಿಮಾನಿಗಳನ್ನೂ ಒಳಗೆ ಬಿಟ್ಟರೆ ನೂಕು ನುಗ್ಗಲು ಆಗಿವ ಸಾಧ್ಯತೆ ಇರುತ್ತದೆ. ಹೀಗಾಗಿ, ಅನುಶ್ರೀ-ರೋಷನ್ ಆಮಂತ್ರಣ ಇರುವವರಿಗೆ ಮಾತ್ರ ಒಳಗೆ ಬಿಡಲು ಸೂಚನೆ ನೀಡಿದ್ದಾರೆ.