Kannada News Photo gallery finally success installing temporary stop-lock gate at Tungabhadra Reservoir Karnataka News In Kannada
ರೈತರಿಗೆ ಗುಡ್ನ್ಯೂಸ್: ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಸಿಹಿ ಹಂಚಿ ಸಂಭ್ರಮ
ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19ರ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಅಡ್ಡಿಯಾಗಿದ್ದ ಸ್ಕೈವಾಕ್ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ತುಂಗಾಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಇಂದು (ಆಗಸ್ಟ್ 16) ರಾತ್ರಿ ಮೊದಲ ವರಮಹಾಲಕ್ಷ್ಮೀ ಹಬ್ಬಂದು ಪ್ಲೇಟ್ ಕೂರಿಸಲಾಯಿತು. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
1 / 10
ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ.
2 / 10
ಅಡ್ಡಿಯಾಗಿದ್ದ ಸ್ಕೈವಾಕ್ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
3 / 10
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ.
4 / 10
ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞಯ ನಾಯ್ಡು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಸಂಸದ ರಾಜಶೇಖರ್ ಹಿಟ್ನಾಳ ಅವರು ಸಿಹಿ ತಿನಿಸಿ ಸಂಭ್ರಮಿಸಿದರು.
5 / 10
ಸತತ ಎರಡು ದಿನಗಳಿಂದ ಅಳವಡಿಕೆ ಹರಸಾಹಸ ಮಾಡಿಲಾಗಿತ್ತು. ಆದ್ರೆ, ಇಂದು(ಆಗಸ್ಟ್ 16) ಕತ್ತಲಾದರೂ ಸಹ ಸಿಬ್ಬಂದಿ ಲೈಟ್ ಹಾಕಿಕೊಂಡೇ ಮೊದಲ ಹಂತದ ಸ್ಟಾಪ್ ಲಾಗ್ ಗೇಟ್ನ ಮೊದಲ ಎಲಿಮೆಂಟ್ ಅಳವಡಿಕೆಗೆ ಮುಂದಾಗಿದ್ದರು. ಇದೀಗ ಅದು ಸಕ್ಸಸ್ ಆಗಿದೆ. ಇದರಿಂದ ಸಂಭ್ರಮ ಮನೆ ಮಾಡಿದೆ.
6 / 10
ಈ ಸ್ಟಾಪ್ ಲಾಗ್ ಗೇಟ್ ಅಳವಡಿಕೆಗೆ ಎರಡು ದಿನಗಳಿಂದ ಸಿಬ್ಬಂದಿ ಹರಸಾಹಸ ಪಟ್ಟಿತ್ತು. ಕೊನೆಗೆ ಇಂದು(ಶನಿವಾರ) ಅಡ್ಡಿಯಾಗಿದ್ದ ಸ್ಕೈವಾಕ್ ತೆರವುಗೊಳಿಸಿ ಬಳಿಕ ಸ್ಟಾಪ್ ಲಾಗ್ ಗೇಟ್ ಅನ್ನು ಯಶಸ್ವಿಯಾಗಿ ಅವಳಡಿಸಲಾಗಿದೆ.
7 / 10
ನೀಡಿದ ಸಚಿವ ಶಿವರಾಜ್ ತಂಗಡಗಿ, ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ. ಹರಿಯೋ ನೀರಲ್ಲಿ ಎಲಿಮೆಂಟ್ ಅಳವಡಿಸೋದು ದೊಡ್ಡ ಸವಾಲಾಗಿತ್ತು. ಆದ್ರೆ ಕಾರ್ಮಿಕರು ಯಶಸ್ವಿಯಾಗಿ ಅಳವಡಿಸಲು ಯಶಸ್ವಿಯಾಗಿದ್ದಾರೆ. ಹೀಗಾಗಿ ಕನ್ನಯ್ಯ ನಾಯ್ಡು ಸೇರಿದಂತೆ ಎಲ್ಲಾ ಸಿಬ್ಬಂದಿ ಗೆ ಧನ್ಯವಾದಗಳು ಎಂದು ಸಂತಸ ವ್ಯಕ್ತಪಡಿಸಿದರು.
8 / 10
ಸಿಎಂ ಮತ್ತು ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ( ಆಗಸ್ಟ್ 17) ಸಂಜೆವರಗೆ ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳೆಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.
9 / 10
ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದರು. ಅಲ್ಲದೇ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.
10 / 10
ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಮಾತನಾಡಿ, ಕಾರ್ಮಿಕರು ಜೀವ ಪಣಕ್ಕಿಂಟು ಕೆಲಸ ಮಾಡಿದ್ದಾರೆ. ಎಲಿಮೆಂಟ್ ಅಳವಡಿಕೆ ಸಮಯದಲ್ಲಿ ಸಾಕಷ್ಟು ಭಯವಾಗಿತ್ತು. ನೀರಲ್ಲಿ ಎಲಿಮೆಂಟ್ ಇಳಿಯುವಾಗ ಕ್ರೇನ್ ಗಳು ಶೇಕ್ ಆಗುತ್ತಿದ್ದವು. ಆದರೂ ಸಹ ನಮ್ಮ ಕಾರ್ಮಿಕರು ಭಯ ಪಡದೇ ಕೆಲಸ ನಿರ್ವಹಿಸಿದ್ದಾರೆ. ನೀರನ್ನು ಸಂಪೂರ್ಣ ಖಾಲಿ ಮಾಡದೇ ಹರಿಯೋ ನೀರಲ್ಲಿ ಎಲಿಮೆಂಟ್ ಅಳವಡಿಸಲಾಗಿದೆ. ಇನ್ನು 72 ಟಿಎಂಸಿ ನೀರು ಉಳಿಯುತ್ತದೆ. ಹೀಗಾಗಿ ರೈತರ ಬೆಳೆಗೆ ನೀರು ಬಿಡೋ ಕೆಲಸವಾಗುತ್ತದೆ ಎಂದರು. ಈ ಮೂಲಕ ಜಲಾಶಯದಲ್ಲಿ 72 ಟಿಎಂಸಿ ನೀರು ಉಳಿಯಲಿದೆ.
Published On - 10:12 pm, Fri, 16 August 24