ಹಾವೇರಿ ಪಟಾಕಿ ಅಗ್ನಿ ದುರಂತದಲ್ಲಿ ಮೂವರ ಸಾವು: ಹಳೇ ವಿದ್ಯಾರ್ಥಿಗಳಿಗಾಗಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಶಾಲಾ ಆಡಳಿತ ಮಂಡಳಿ

Edited By:

Updated on: Sep 19, 2023 | 9:57 AM

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಹಳೇ ವಿದ್ಯಾರ್ಥಿಗಳಿಗಾಗಿ ಪಟಾಕಿ ಹಚ್ಚದೆ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿತು.

1 / 7
ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಮದ ಬಳಿ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದರು. ಈ ಹಿನ್ನೆಲೆಯಲ್ಲಿ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

2 / 7

ಈ ಘಟನೆಯಲ್ಲಿ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ,ದ್ಯಾಮಪ್ಪ ಓಲೇಕಾರ ಮೂವರು ಯುವಕರು ಮೃತಪಟ್ಟಿದರು.

3 / 7

ಪಟಾಕಿ ಅಂಗಡಿಯ ಅಗ್ನಿದುರಂತದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಟೇನಹಳ್ಳಿ ಗ್ರಾಮದಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲಾಗಿದೆ.

4 / 7

ಈ ಮೂವರು ಯುವಕರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳಾಗಿದ್ದರು.

5 / 7

ಈ ಹಿನ್ನೆಲೆಯಲ್ಲಿ ಇವರ ಸ್ಮರ್ಣಾರ್ಥ ಶಾಲಾ ಆಡಳಿತ ಮಂಡಳಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ.

6 / 7

ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಪಟಾಕಿ ಹಚ್ಚದೆ ಗಣಪತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

7 / 7

ಬಳಿಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಣೇಶನಿಗೆ ಪೂಜೆ ಮಾಡಿ ಮತ್ತೆ ಇಂತಹ ಅವಘಡಗಳು ನಡೆಯದಂತೆ ನೋಡಿಕೊ ಗಣಪ ಎಂದು ಪಾರ್ಥಿಸಿದರು.

Published On - 3:20 pm, Mon, 18 September 23

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Loading...
Unable to load recommendations.
Follow Us