ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ: ಜೇವರ್ಗಿ ಶಾಸಕ ಅಜಯ್ ಸಿಂಗ್ ಚಾಂಪಿಯನ್, ನಗದು ಬಹುಮಾನ ಸಿಕ್ಕಿದ್ದೆಷ್ಟು ಗೊತ್ತಾ?

|

Updated on: Jul 23, 2024 | 7:55 PM

ಚೆಸ್ ಆಟವನ್ನು ಜನರಿಗೆ ಇನ್ನಷ್ಟು ಪರಿಚಯ ಮಾಡುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ ಇದಾಗಿದ್ದು, ಚೊಚ್ಚಲ ಆವೃತ್ತಿಯಲ್ಲೇ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ರನರ್ ಅಪ್ ಯಾರು? ಯಾರಿಗೆ ಎಷ್ಟು ಬಹುಮಾನ ಎನ್ನುವ ವಿವರ ಇಲ್ಲಿದೆ.

1 / 6
ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು,
ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್  ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಒಟ್ಟು 6 ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಟೂರ್ನಿಯಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಚಾಂಪಿಯನ್ ಆಗಿದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ರನರ್ ಅಪ್​ ಅಗಿದ್ದಾರೆ. ಇನ್ನು ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

2 / 6
ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ ಅಂತ್ಯವಾಗಿದ್ದು,  ಚಾಂಪಿಯನ್, ರನರ್ ಅಪ್ ಹಾಗೂ ತೃತೀಯ ಸ್ಥಾನ ಪಡೆದುಕೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು.

3 / 6
ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಈ ಚೊಚ್ಚಲ ಟೂರ್ನಿಯ ಚಾಂಪಿಯನ್​ ಆಗಿ ಹೊರಹೊಮ್ಮಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಟ್ರೋಫಿ ನೀಡಿದರು. ಅಲ್ಲದೇ ಚಾಂಪಿಯನ್ ಆದ ಅಜಯ್ ಸಿಂಗ್ ಅವರಿಗೆ 2 ಲಕ್ಷ ರೂ. ನಗದು ಬಹುಮಾನ ಸಹ ಸಿಕ್ಕಿದೆ.

4 / 6
ಇನ್ನು ಫೈನಲ್​ ಪಂದ್ಯದಲ್ಲಿ ಅಜಯ್ ಸಿಂಗ್ ವಿರುದ್ಧ ಪರಾಭವಗೊಂಡು ರನರ್ ಅಪ್ ಆಗಿರುವ ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟಿದ್ದು, ಅವರಿಗೆ ಸಿಎಂ ಬಹುಮಾನ ವಿತರಿಸಿ ಶುಭ ಹಾರೈಸಿದರು.

5 / 6
ಇನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಈ ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೂ ಸಹ ಸಿದ್ದರಾಮಯ್ಯ ಅವರು ಪ್ರಶಸ್ತಿ ನೀಡಿದರು.

6 / 6
ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಮತ್ತು ಅಖಿಲ ಭಾರತ ಚೆಸ್ ಫೆಡರೇಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಶತಮಾನೋತ್ಸವದ ಅಂಗವಾಗಿ ಈ ಹಬ್ಬ ಆಯೋಜಿಸಲಾಗಿತ್ತು. ಸಚಿವರು, ಶಾಸಕರು ಮತ್ತು ಅಧಿಕಾರಿ/ಸಿಬ್ಬಂದಿಗಾಗಿ ಓಪನ್ ರಾಪಿಡ್ ಚೆಸ್ ಟೂರ್ನ್‌ಮೆಂಟ್ 2024 ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದ್ದರು.