- Kannada News Photo gallery First Time In History Karnataka cm siddaramaiah performs bagina to tungabhadra dam News In kannada
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ
ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಇಂದು (ಸೆಪ್ಟೆಂಬರ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನ ಅರ್ಪಣೆ ಮಾಡಿದರು. ಈ ಮೂಲಕ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಮೊದಲ ಮುಖ್ಯಮಂತ್ರಿ ಎನಿಸಿಕೊಂಡರು. ಬಾಗಿನ ಅರ್ಪಣೆ ಈ ಹಿನ್ನೆಲೆ ಮುನಿರಾಬಾದನಲ್ಲಿ ಹಬ್ಬದ ವಾತವಾರಣ ಕಂಡು ಬಂತು. ಗ್ರಾಮದ ಮುಖ್ಯ ಬೀದಿಗಳನ್ನು ತಳೀರು ತೋರಣಗಳಿಂದ ಸಿಂಗರಿಸಲಾಗಿದೆ. ಗ್ರಾಮದ ವೃತ್ತಗಳಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ ಕಂಗೊಳಿಸಿದವು.
Updated on: Sep 22, 2024 | 3:58 PM

ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಇಂದು (ಸೆಪ್ಟೆಂಬರ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನ ಅರ್ಪಣೆ ಮಾಡಿದರು.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ತುಂಗಾಭದ್ರ ಜಲಾಶಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ,ಜಮೀರ್ ಅಹ್ಮದ್ ಖಾನ್, ಶರಣಪ್ರಕಾಶ್ ಪಾಟೀಲ್ ಸೇರಿ ಅನೇಕ ಸಚಿವರು ಶಾಸಕರು ಭಾಗಿಯಾಗಿದ್ದರು.

ಗೇಟ್ ದುರಸ್ತಿಯ ಸೂತ್ರದಾರಿ ಡ್ಯಾಮ್ ತಜ್ಞ ಕನ್ನಯ್ಯ ನಾಯ್ಡು ಸಹ ಈ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಕನ್ನಯ್ಯ ನಾಯ್ಡು ಅವರನ್ನ ಪಕ್ಕದಲ್ಲೆ ನಿಲ್ಲಿಸಿಕೊಂಡು ತುಂಗಾಭದ್ರೆಗೆ ಬಾಗಿನ ಅರ್ಪಿಸಿದರು.

ಈ ತುಂಗಾಭದ್ರ ಡ್ಯಾಂಗೆ ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿರುವುದು ಇದೇ ಮೊದಲು. ಭರ್ತಿಯಾಗಿದ್ದ ಜಲಾಶಯಕ್ಕೆ ಸಿದ್ದರಾಮಯ್ಯ ಈ ಹಿಂದೆಯೇ ಬಾಗಿನ ಅರ್ಪಿಸಬೇಕಿತ್ತು. ಆದರೆ, ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಗೇಟ್ ರಿಪೇರಿಯಾಗಿ ಮತ್ತೆ ಜಲಾಶಯ ಭರ್ತಿಯಾಗಿದ್ದು, ಸಿಎಂ ಬಾಗಿನ ಅರ್ಪಿಸಿ ಇತಿಹಾಸ ಬರೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ, ಜಲಸಂಪನ್ಮೂಲ ಸಚಿವರು ಆದ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಣೆ ಮಾಡಿದ ಬಳಿಕ , ಗೇಟ್ ನಂ.19ನ್ನು ಒಂದು ವಾರದಲ್ಲಿ ದುರಸ್ತಿ ಮಾಡಿದ ತಂತ್ರಜ್ಞರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ, ಜಲಸಂಪನ್ಮೂಲ ಸಚಿವರು ಆದ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಣೆ ಜೊತೆಗೆ ಜಲಾಶಯಕ್ಕೆ ಹಾಲು ಸುರಿದರು.

ಕ್ರಸ್ಟ್ ಗೇಟ್ ಪರಿಶೀಲನೆ ಮಾಡಲು ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಮುರಿದಿರುವ ಕ್ರಸ್ಟ್ ಗೇಟ್ ಸರಿಪಡಿಸಲಾಗುತ್ತದೆ. ಮತ್ತೆ ಮಳೆ ಬಂದೇ ಬರುತ್ತದೆ. ಜಲಾಶಯವೂ ಮತ್ತೆ ಭರ್ತಿಯಾಗಿಯೇ ಆಗುತ್ತದೆ. ನಾನು ಮತ್ತೆ ಬಂದು ಬಾಗಿನ ಅರ್ಪಣೆ ಮಾಡುತ್ತೇನೆ ಎಂದಿದ್ದರು.



















