AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಖಾಯಿಲೆಗಳು ನಿಮ್ಮಿಂದ ದೂರ ಇರಬೇಕೆ? ಈ ಐದು ಎಲೆಗಳನ್ನು ಜಗಿಯಿರಿ

Leaves for health: ನಮ್ಮ ಜೀವನಶೈಲಿ ಮತ್ತು ಇತರ ಕಾರಣಗಳಿಂದ ಮಧುಮೇಹ, ಬೇಡದ ಕೊಲೆಸ್ಟ್ರಾಲ್, ಅಧಿಕ ಬಿಪಿಯಂತಹ ಗಂಭೀರ ಕಾಯಿಲೆಗಳು ನಮ್ಮನ್ನು ಆವರಿಸಬಹುದು. ವೈದ್ಯರೊಂದಿಗೆ ಚಿಕಿತ್ಸೆ ಪಡೆಯುವುದರ ಜತೆಗೆ ಈ ಎಲೆಗಳನ್ನು ತಿನ್ನುವುದರಿಂದ ಖಾಯಿಲೆಯ ಪರಿಣಾಮಗಳನ್ನು ಕಡಿಮೆಗೊಳಿಸಬಹುದು. ತುಳಸಿ, ಕರಿಬೇವು, ಬೆಳ್ಳುಳ್ಳಿ ಎಲೆ, ಬೇವು ಹಾಗೂ ಜಿನ್ಸೆಂಗ್​ನ ಎಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ.

TV9 Web
| Updated By: shivaprasad.hs|

Updated on:Apr 09, 2022 | 10:15 AM

Share
ತುಳಸಿ ಎಲೆಗಳು: ಬಾಯಿಯಿಂದ ಬರುವ ದುರ್ವಾಸನೆಯಿಂದ ನೀವು ತೊಂದರೆಗೀಡಾಗಿದ್ದರೆ, ನೀವು ಪ್ರತಿದಿನ ಬೆಳಿಗ್ಗೆ ತುಳಸಿ ಎಲೆಗಳನ್ನು ತಿನ್ನಬೇಕು. ತಜ್ಞರ ಪ್ರಕಾರ, ಇದರಲ್ಲಿರುವ ಔಷಧೀಯ ಗುಣಗಳು ದವಡೆಯಲ್ಲಿನ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ ಮತ್ತು ಬಾಯಿಯನ್ನು ತಾಜಾವಾಗಿರಿಸುತ್ತದೆ.

1 / 5
ಕರಿಬೇವಿನ ಎಲೆಗಳು: ಹೆಚ್ಚಿನ ಕೊಲೆಸ್ಟ್ರಾಲ್‌ನಿಂದ ಹೃದಯ ಸಂಬಂಧಿ ಕಾಯಿಲೆಗಳು, ಹೃದಯಾಘಾತ ಉಂಟಾಗಬಹುದು. ವರದಿಗಳ ಪ್ರಕಾರ, ಕರಿಬೇವಿನ ಎಲೆಗಳ ಸೇವನೆಯು ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯೋಜನಕಾರಿ.

2 / 5
ಬೆಳ್ಳುಳ್ಳಿ ಎಲೆಗಳು: ಭಾರತದಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ. ವರದಿಗಳ ಪ್ರಕಾರ, ಕ್ಯಾನ್ಸರ್​ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಬೆಳ್ಳುಳ್ಳಿ ಎಲೆಗಳನ್ನು ಸೇವಿಸಬಹುದು. ಇದು ಕರುಳಿನ ಕ್ಯಾನ್ಸರ್, ಚರ್ಮದ ಕ್ಯಾನ್ಸರ್​ನ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆಗಳಲ್ಲಿ ಬಹಿರಂಗವಾಗಿದೆ.

3 / 5
ಜಿನ್ಸೆಂಗ್ ಎಲೆಗಳು: ಪ್ರಸ್ತುತ ಹೆಚ್ಚಿನ ಜನರು ಮೂತ್ರಪಿಂಡ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದಾರೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಜಿನ್ಸೆಂಗ್ ಎಲೆಗಳನ್ನು ಸೇವಿಸಬಹುದು. ಇದು ಪ್ರಯೋಜನಕಾರಿ ಎನ್ನುತ್ತವೆ ವರದಿಗಳು.

4 / 5
ಬೇವಿನ ಎಲೆಗಳು: ಮಧುಮೇಹ ರೋಗಿಗಳಿಗೆ ಬೇವಿನ ಎಲೆಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿವೆ ಎನ್ನುತ್ತವೆ ಅಧ್ಯಯನಗಳು.

5 / 5

Published On - 9:36 am, Sat, 9 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ