Karnataka Railway Stations: ಪುನರಾಭಿವೃದ್ಧಿಗೊಂಡಿರುವ ಕರ್ನಾಟಕದ ಐದು ರೈಲ್ವೆ ನಿಲ್ದಾಣಗಳು ಹೇಗಿವೆ ನೋಡಿ
ಕರ್ನಾಟಕದ ಐದು ರೈಲು ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 103 'ಅಮೃತ್ ನಿಲ್ದಾಣ'ಗಳನ್ನು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಕಾನೇರ್‌ನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಈ ಐದು ನಿಲ್ದಾಣಗಳನ್ನು ಪ್ರಧಾನಿ ಮೋದಿ ಗುರುವಾರ ಲೋಕಾರ್ಪಣೆಗೊಳಿಸಿದ್ದಾರೆ. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಾಗಲಕೋಟೆ ರೈಲು ನಿಲ್ದಾಣ: ಅಮೃತ ಭಾರತ ನಿಲ್ದಾಣ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ಪುನರಾಭಿವೃದ್ಧಿ ಮಾಡಲಾಗಿದೆ. ಈ ನವೀಕೃತ ನಿಲ್ದಾಣವು ಇದೀಗ ನವೀನ ನಿಲ್ದಾಣದ ಕಟ್ಟಡ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಹೊಂದಿದೆ. ವಿಶಾಲವಾದ ಸಂಚಾರ ಪ್ರದೇಶ ಮತ್ತು ಆಟೋಗಳು, ದ್ವಿಚಕ್ರ ವಾಹನಗಳು ಮತ್ತು 4 ಚಕ್ರ ವಾಹನಗಳಿಗೆ ಮೀಸಲಾದ ಪಾರ್ಕಿಂಗ್ ಪ್ರದೇಶಗಳೊಂದಿಗೆ ಆಧುನಿಕ ಪ್ರಯಾಣದ ಅನುಭವವನ್ನು ನೀಡುತ್ತದೆ.
1 / 7
ಧಾರವಾಡ ರೈಲು ನಿಲ್ದಾಣ: ಎಬಿಎಸ್‌ಎಸ್ ಅಡಿಯಲ್ಲಿ ಧಾರವಾಡ ರೈಲು ನಿಲ್ದಾಣದ ಪುನರಾಭಿವೃದ್ಧಿ 17.1 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ಪ್ರಮುಖ ಸುಧಾರಣೆಗಳಲ್ಲಿ ಹೊಸ 2ನೇ ಪ್ರವೇಶ ದ್ವಾರ, ಎಲ್ಲಾ ಪ್ಲಾಟ್‌ಫಾಮ್ರ್ಗಳನ್ನು ಸಂಪರ್ಕಿಸುವ 12 ಮೀ. ಅಗಲದ ಪಾದಚಾರಿ ಸೇತುವೆ ಮತ್ತು ಸುಲಭ ಪ್ರವೇಶಕ್ಕಾಗಿ 3 ಲಿಫ್ಟ್ಗಳು ಸೇರಿವೆ. ಪ್ಲಾಟ್‌ಫಾರ್ಮ್ 1ರಲ್ಲಿ 2 ಎಸ್ಕಲೇಟರ್ಗಳನ್ನು ಅಳವಡಿಸಲಾಗಿದ್ದು, ಅದರ ಜೊತೆಗೆ ಮುಂಭಾಗದ ಬೆಳಕಿನ ವ್ಯವಸ್ಥೆಯೂ ಸಹ ನಿಲ್ದಾಣದ ಆಕರ್ಷಣೆಯನ್ನು ಹೆಚ್ಚಿಸುತ್ತದೆ.
2 / 7
ಗದಗ ರೈಲು ನಿಲ್ದಾಣ: ಸುಮಾರು 23.24 ಕೋಟಿ ರೂ. ವೆಚ್ಚದಲ್ಲಿ ಗದಗ ರೈಲು ನಿಲ್ದಾಣದ ಪುನರಾಭಿವೃದ್ಧಿಗೊಂಡಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ನಿಲ್ದಾಣವು ವಿಶಾಲವಾದ, ಕಲಾತಕವಾಗಿ ವಿನ್ಯಾಸಗೊಳಿಸಲಾದ ಪ್ರವೇಶದ್ವಾರ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳೊಂದಿಗೆ ಉತ್ತಮವಾಗಿ ಯೋಜಿಸಲಾದ ಸಂಚಾರ ಪ್ರದೇಶ ಮತ್ತು ಆಟೋಗಳು, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರ ವಾಹನಗಳಿಗೆ ಮೀಸಲಾದ ಪಾರ್ಕಿಂಗ್ ಹೊಂದಿರುವ ಆಧುನಿಕ ಕಟ್ಟಡವನ್ನು ಹೊಂದಿದೆ.
3 / 7
ಗೋಕಾಕ್ ರಸ್ತೆ ರೈಲು ನಿಲ್ದಾಣ:
ಬಿಕಾನೇರ್ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಕಾನೇರ್ನಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದರು. ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಈ ಐದು ನಿಲ್ದಾಣಗಳನ್ನು ಪ್ರಧಾನಿ ಮೋದಿ ಗುರುವಾರ ಲೋಕಾರ್ಪಣೆಗೊಳಿಸಿದ್ದಾರೆ. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
4 / 7
ಮುನಿರಾಬಾದ್ ರೈಲು ನಿಲ್ದಾಣ: ಮುನಿರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಯನ್ನು ಎಬಿಎಸ್‌ಎಸ್ ಅಡಿಯಲ್ಲಿ 18.40 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ನವೀಕರಿಸಿದ ನಿಲ್ದಾಣವು ಈಗ ಹೊಸ ಕಟ್ಟಡ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳೊಂದಿಗೆ ಉತ್ತಮವಾಗಿ ನಿರ್ವಹಿಸಲ್ಪಟ್ಟ ಸಂಚಾರ ಪ್ರದೇಶ ಮತ್ತು ಆಟೋಗಳು, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಮೀಸಲಾದ ಪಾರ್ಕಿಂಗ್ ಸ್ಥಳಗಳನ್ನು ಹೊಂದಿದೆ.
5 / 7
ಬಿಕಾನೇರ್ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಕಾನೇರ್ನಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದರು. ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಈ ಐದು ನಿಲ್ದಾಣಗಳನ್ನು ಪ್ರಧಾನಿ ಮೋದಿ ಗುರುವಾರ ಲೋಕಾರ್ಪಣೆಗೊಳಿಸಿದ್ದಾರೆ. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
6 / 7
ಬಾಗಲಕೋಟೆಯಲ್ಲಿ ಉದ್ಘಾಟನೆ ನೆರವೇರಿಸಿದ ವಿ ಸೋಮಣ್ಣ : ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ದೇಶಾದ್ಯಂತ ಪುನರಾಭಿವೃದ್ಧಿಗೊಂಡ 103 ರೈಲು ನಿಲಾಣಗಳು ಮತ್ತು ಇತರೆ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು. ಬಾಗಲಕೋಟೆ ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ವಿ ಸೋಮಣ್ಣ ಉದ್ಘಾಟನೆ ನೆರವೇರಿಸಿದರು.