ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ(Flipkart) ಡಿಸೆಂಬರ್ 16 ಕ್ಕೆ ಆರಂಭಿಸಿದ್ದ ಬಿಗ್ ಸೇವಿಂಗ್ ಡೇಸ್ ಸೇಲ್ (Big savings days sales) ಮುಗಿಯುತ್ತಾ ಬಂದಿದ್ದು, ಇಂದು ಕೊನೆ ದಿನವಾಗಿದೆ. ಈ ಸೇಲ್ನಲ್ಲಿ ಸ್ಮಾರ್ಟ್ಫೋನ್ಗಳು ಮತ್ತು ಲ್ಯಾಪ್ಟಾಪ್ಗಳಿಂದ ಹಿಡಿದು ಇಯರ್ಬಡ್ಸ್, ಗೃಹಉಪಯೋಗಿ ವಸ್ತುಗಳವರೆಗೆ ಅನೇಕ ಅದ್ಭುತ ಕೊಡುಗೆಗಳನ್ನು ನೀಡುತ್ತಿದೆ.
ಆರು ದಿನಗಳ ಕಾಲ ನಡೆದ ಈ ಮೇಳದಲ್ಲಿ ಡಿಸ್ಕೌಂಟ್ ಜೊತೆಗೆ ಅನೇಕ ಆಫರ್ಗಳನ್ನೂ ನೀಡಲಾಗಿದೆ. ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ಗಳು ಮತ್ತು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳ ಮೇಲೆ ರಿಯಾಯಿತಿ ನೀಡಲಾಗಿದೆ. ಇದರ ಜೊತೆಗೆ ಪ್ರಮುಖ ಸ್ಮಾರ್ಟ್ಫೋನ್ಗಳ ಮೇಲೆ ಎಕ್ಸ್ಚೇಂಜ್ ಆಫರ್ ಸೇರಿದಂತೆ ಕಡಿಮೆ ಬೆಲೆಗೆ ಖರೀದಿಸಬಹುದಾದ ಆಫರ್ ಇದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು SBI ಕ್ರೆಡಿಟ್ ಮತ್ತು EMI ವಹಿವಾಟಿನ ಮೇಲೆ 10% ರಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ. ಹಾಗಾದ್ರೆ ಇಂದಿನ ಕೊನೇ ದಿನದ ಸೇಲ್ನಲ್ಲಿ ನೀವು ಯಾವೆಲ್ಲಾ ಸ್ಮಾರ್ಟ್ಫೋನ್ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಐಫೋನ್ 12 ಅನ್ನು ಕೇವಲ 53,999ರೂ.ಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲ ಬೆಲೆ 65,900ರೂ. ಆಗಿದೆ ಅನ್ನೊದನ್ನ ಗಮನಿಸಬೇಕು. ಇದಲ್ಲದೆ ಈ ರಿಯಾಯಿತಿಯ ಮೇಲೆ, ನೀವು SBI ಕ್ರೆಡಿಟ್ ಕಾರ್ಡ್ ಅನ್ನು ಬಳಸುವುದರಿಂದ 3,000ರೂ.ವರೆಗಿನ ರಿಯಾಯಿತಿ ಕೂಡ ಪಡೆದುಕೊಳ್ಳಬಹುದಾಗಿದೆ. ಇದೆಲ್ಲಾ ರಿಯಾಯಿತಿಯನ್ನು ಪರಿಗಣಿಸಿದರೆ ಐಫೋನ್ 12 ಅನ್ನು ಫ್ಲಿಪ್ಕಾರ್ಟ್ನಲ್ಲಿ ನಿಮಗೆ 50,999ರೂ.ಗಳಿಗೆ ದೊರೆಯಲಿದೆ.
ಐಫೋನ್ 12 OLED ಡಿಸ್ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ.
ಇನ್ನು ಮೋಟೋ G60 ಸ್ಮಾರ್ಟ್ಫೋನ್ 15,999 ರೂ. ಗಳಿಗೆ ಲಭ್ಯವಾಗಲಿದೆ. ಸೇಲ್ನಲ್ಲಿ 1500 ರೂ. ಗಳ ತನಕ ಫ್ಲಾಟ್ ರಿಯಾಯಿತಿಯನ್ನು ಒಳಗೊಂಡಿದೆ. ಜೊತೆಗೆ ಖರೀದಿದಾರರು ಹೆಚ್ಚುವರಿಯಾಗಿ ಕೆಲವು ಬ್ಯಾಂಕ್ ಕೊಡುಗೆಗಳನ್ನು ಪಡೆಯಬಹುದು. ಆದರೆ ಫ್ಲಿಪ್ಕಾರ್ಟ್ ಅಧಿಕೃತವಾಗಿ ಅದರ ಬಗ್ಗೆ ಇನ್ನೂ ಏನನ್ನೂ ಬಹಿರಂಗಪಡಿಸಿಲ್ಲ.
ಮೋಟೋ G60 ಸ್ಮಾರ್ಟ್ಫೋನ್ 6.80-ಇಂಚಿನ ಮ್ಯಾಕ್ಸ್ ವಿಷನ್ FHD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G ಪ್ರೊಸೆಸರ್ ಬಲವನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಬೃಹತ್ 6000 mAh ಬ್ಯಾಟರಿಯನ್ನು ಹೊಂದಿದೆ, ಇದು ಒಂದೇ ಚಾರ್ಜ್ನಲ್ಲಿ ಎರಡು ದಿನಗಳವರೆಗೆ ಇರುತ್ತದೆ.
ಇನ್ಫಿನಿಕ್ಸ್ 5A ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ನಲ್ಲಿ ಕೇವಲ 6,499 ರೂ. ಗೆ ಸೇಲ್ ಆಗುತ್ತಿದೆ. ಇನ್ನು ಈ ಸ್ಮಾರ್ಟ್ಫೋನ್ 6.52 HD+ ಡ್ರಾಪ್ ನಾಚ್ ಡಿಸ್ಪ್ಲೇ ಹೊಂದಿದೆ. ಇದು ಟ್ರಿಪಲ್ ಎಲ್ಇಡಿ ಫ್ಲ್ಯಾಷ್ ಒಳಗೊಂಡ 8MP ಸೆನ್ಸಾರ್ ಸಾಮರ್ಥ್ಯದ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 8MP ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.