SM Krishna: ಕರ್ನಾಟಕಕ್ಕೆ ಎಸ್​ಎಂ ಕೃಷ್ಣ ಕೊಡುಗೆಗಳೇನು? ಚಿತ್ರ ಸಹಿತ ಮಾಹಿತಿ ಇಲ್ಲಿದೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಮದ್ದೂರಿನಲ್ಲಿ ನಡೆಯಲಿದೆ. ಸ್ತ್ರೀಶಕ್ತಿ ಸಂಘ, ಯಶಸ್ವಿನಿ ಯೋಜನೆ, ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಗುತ್ತಿದೆ. ಅವರು 1962 ರಲ್ಲಿ ರಾಜಕೀಯ ಪ್ರವೇಶಿಸಿ, ಮಂಡ್ಯದಿಂದ ಮೂರು ಬಾರಿ ಸಂಸದರಾಗಿದ್ದರು.

ವಿವೇಕ ಬಿರಾದಾರ
|

Updated on:Dec 10, 2024 | 12:13 PM

ಕರ್ನಾಟಕದ ಹಿರಿಯ ರಾಜಕಾರಣಿ, ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ನಿಧಿನರಾಗಿದ್ದಾರೆ. ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ.

1 / 9
1934 ರಂದು ಮಹಾತ್ಮ ಗಾಂಧೀಜಿ ಅವರು ಸೋಮನಹಳ್ಳಿಗೆ ಬಂದ್ದಿದ್ದರು. ಈ ವೇಳೆ ಮೂರು ವರ್ಷದ ಪುಟ್ಟ ಎಸ್​ಎಂ ಕೃಷ್ಣ ಅವರು ಗಾಂಧೀಜಿ ಅವರಿಗೆ ಹೂವಿನ ಮಾಲೆ ಹಾಕಿದ್ದರು. ಪುಟ್ಟ ಎಸ್​ಎಂ ಕೃಷ್ಣ ಅವರ ಗಲ್ಲವನ್ನು ಮುಟ್ಟಿ ಮಹಾತ್ಮಾ ಗಾಂಧಿಜಿ ಮಾತನಾಡಿಸಿದ ಕ್ಷಣ.

2 / 9
ಕೃಷ್ಣ ಅವರು 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವ ಮೂಲಕ ತಮ್ಮ ಚುನಾವಣಾ ರಾಜಕೀಯ ಜೀವನವನ್ನು ಆರಂಭಿಸಿದರು. ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

3 / 9
ಎಸ್​ಎಂ ಕೃಷ್ಣ ಅವರು 1972 ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು ಮತ್ತು ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸರ ಸಂಪುಟದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.

4 / 9
ಎಸ್​ಎಂ ಕೃಷ್ಣ ಅವರು ಹಲವು ಯೋಜನೆಗಳಲ್ಲಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಕೂಡ ಒಂದು. ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಆರಂಭಿಸಿದರು. ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಮನೆ ಮನೆ ತಲುಪಿದ್ದು, ಇದರಿಂದ ಕೋಟ್ಯಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

5 / 9
ಕರ್ನಾಟಕದ ಅಸಂಘಟಿತ ವಲಯದ ಕಾರ್ಮಿಕರು, ಮಧ್ಯಮ ಮತ್ತು ಕಡಿಮೆ-ಮಧ್ಯಮ ಆದಾಯ ಹೊಂದಿದವರನ್ನು ಕೇಂದ್ರೀಕರಿಸಿ, ಎಲ್ಲರಿಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ನೀಡಲು ಯಶಸ್ವಿನಿ ಯೋಜನೆ ಆರಂಭಿಸಿದರು. ಇದರಿಂದ ಪ್ರತಿಯಿಬ್ಬರಿಗೂ ಹೆಚ್ಚು ಅಗತ್ಯವಿರುವಾಗ ಉನ್ನತ ಗುಣಮಟ್ಟದ ಆರೋಗ್ಯ ಪಡೆಯಬಹುದಾಗಿದೆ.

6 / 9
ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ 2003-2004ರ ಅವಧಿಯಲ್ಲಿ  ಎಸ್​ಎಂ ಕೃಷ್ಣ ಪರಿಹಾರ ಘೋಷಣೆ ಮಾಡಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರು ಪರಿಹಾರಕ್ಕೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ಆಗ, ಎಸ್​ಎಂ ಕೃಷ್ಣ ಅವರು ಸಚಿವ ಸಂಪುಟ ಸಮೇತ ಬಾಗಲಕೋಟೆ ಬಂದು, 638 ಕೋಟಿ ರೂ. ಪರಿಹಾರ ಘೋಷಣೆ ಮಾಡಿದರು.

7 / 9
ಎಸ್​ಎಂ ಕೃಷ್ಣ ಅವರು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಮಧ್ಯಾಹ್ನದ ಬಿಸಿಯೂಟ ಯೋಜನೆ ಇಂದಿಗೂ ಚಾಲನೆಯಲ್ಲಿದೆ.

8 / 9
ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಸಿಲಿಕಾನ್​ ಸಿಟಿ ಅಥವಾ ಸಿಲಿಕಾನ್​ ವ್ಯಾಲಿ ಆಫ್​ ಇಂಡಿಯಾ ಎಂಬ ಹೆಸರು ಬರಲು ಎಸ್​ಎಂ ಕೃಷ್ಣ ಅವರ ಕೊಡುಗೆ ಅಪಾರವಾಗಿದೆ. ಐಟಿ-ಬಿಟಿ ಕ್ಷೇತ್ರಕ್ಕೆ ಇವರು ಅಗಾದವಾದ ಬೆಂಬಲ ನೀಡಿದರು. ಇವರ ಕಾಲದಲ್ಲಿಯೇ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗೇ ರಾಜ್ಯದಲ್ಲೇ ಮೊದಲ ಫ್ಲೈ ಓವರ್​ ತಲೆ ಎತ್ತಿತು.

9 / 9

Published On - 11:58 am, Tue, 10 December 24

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ