Kannada News Photo gallery former Karnataka CM Jagadish Shettar To Join Congress Today April 17th In bengaluru KPCC Office
Jagadish Shettar: ರಾತ್ರಿ ಇಡೀ ಸುದೀರ್ಘ ಚರ್ಚೆ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಮಾಜಿ ಡಿಸಿಎಂ ಬೆಳಗಾವಿಯ ಪ್ರಭಾವಿ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿಕೆಟ್ ಪತನವಾಗಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 7ನೇ ಬಾರಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲಎನ್ನುವ ಕಾರಣಕ್ಕೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದು, ರಾತ್ರಿ ಇಡೀ ಕಾಂಗ್ರೆಸ್ ನಾಯಕರ ಜೊತೆ ಸಭೆ ಮಾಡಿ ಚರ್ಚಿಸಿದ್ದು, ಕೈ ಹಿಡಿಯಲು ಮುಹೂರ್ತ ಫಿಕ್ಸ್ ಆಗಿದೆ.