ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




