ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Related Photo Gallery
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್: ವಿಡಿಯೋ ವೈರಲ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲ್ಯಾಂಡ್ನ ಬಾರ್ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್ ಆದಾಯ: ಕಲೆಕ್ಷನ್ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು




