
ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.