India’s G20 Presidency: ಅನಾರೋಗ್ಯದ ಮಧ್ಯೆಯೂ ಮೋದಿ ನೇತೃತ್ವದ ಸಭೆಯಲ್ಲಿ ಭಾಗಿಯಾಗಿ ಗಮನಸೆಳೆದ ದೇವೇಗೌಡ

Edited By:

Updated on: Dec 06, 2022 | 12:34 AM

ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಅತ್ಯುನ್ನತ ಜವಾಬ್ದಾರಿಯನ್ನು ಭಾರತ ಹೆಗಲಮೇಲೆ ಹೊತ್ತುಕೊಂಡಿದೆ. ಜಿ20 ಕುರಿತು ಪೂರ್ವಭಾವಿ ಸಭೆಯನ್ನು ಇಂದು(ಡಿಸೆಂಬರ್ 05) ಆಯೋಜಿಸಲಾಗಿತ್ತು. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು.

1 / 8
ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಿತು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಿತು.

2 / 8

ಇಂದು(ಡಿಸೆಂಬರ್ 05) ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

3 / 8

ಜಿ20 ಅಧ್ಯಕ್ಷ ಸ್ಥಾನಕ್ಕೆ ಇಡೀ ಜಗತ್ತಿಗೆ ದೇಶದ ಶಕ್ತಿ, ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಸುವರ್ಣವಕಾಶ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ನಾಯಕರ ಸಹಕಾರ ಕೇಳಿದರು.

4 / 8

ಈ ತಿಂಗಳ ಆರಂಭದಲ್ಲಿ ಜಿ20 ಆತಿಥ್ಯ ಭಾರತಕ್ಕೆ ದೊರಕಿದ್ದು, ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಪಟ್ಟಂತೆ ಚರ್ಚಿಸಲು, ಸಲಹೆಗಳನ್ನು ನೀಡಲು ಎಲ್ಲಾ ನಾಯಕರ ಬಳಿ ಸಹಕಾರ ಕೋರಿದರು.

5 / 8

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಈ ವರ್ಷ ಆಯೋಜಿಸಲಿರುವ ಸಭೆಗಳು, ಕಾರ್ಯಕ್ರಮಗಳ ಕುರಿತು ರೂಪುರೇಷೆ ರಚಿಸಲು ಸರ್ವ ಪಕ್ಷ ಸಭೆ ಆಹ್ವಾನಿಸಲಾಗಿತ್ತು.

6 / 8

ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಿಪಿಟಿ ಮೂಲಕ ಕಾರ್ಯಕ್ರಮಗಳ ವಿವರಗಳನ್ನು ಹೇಳಿದೆ.

7 / 8

ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.

8 / 8

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

Published On - 11:57 pm, Mon, 5 December 22

Loading...
Unable to load recommendations.
Follow Us