AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಕಲ್ಲು ಮಳೆಯಿಂದ ರೈತರು ಕಂಗಾಲು; ನೂರಾರು ಎಕರೆಯಲ್ಲಿ ಬೆಳೆದ ಕಲ್ಲಂಗಡಿ ಬೆಳೆ ಸಂಪೂರ್ಣ ನಾಶ!

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಆಲಿಕಲ್ಲು ಮಳೆ ಮತ್ತು ಗಾಳಿಯಿಂದ ಕಲ್ಲಂಗಡಿ ಬೆಳೆ ಸಂಪೂರ್ಣ ನಾಶವಾಗಿದೆ. ನೂರಾರು ಎಕರೆ ಕಲ್ಲಂಗಡಿ ತೋಟಗಳು ಹಾಳಾಗಿ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಹಣ್ಣುಗಳು ಕೊಳೆತು, ಬೆಲೆ ಕುಸಿದಿದೆ. ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯ ಆರೋಪವಿದ್ದು, ಸಂಕಷ್ಟದಲ್ಲಿರುವ ರೈತರು ತಕ್ಷಣವೇ ಸರ್ಕಾರದಿಂದ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 25, 2026 | 11:55 AM

Share
ಗದಗ ಜಿಲ್ಲೆಯಲ್ಲಿ ಭಾರಿ ಗಾಳಿ, ಮಳೆ ಹಾಗೂ ಆಲಿಕಲ್ಲು ಮಳೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ನೂರಾರು ಎಕರೆಗಳಲ್ಲಿ ಬೆಳೆದ ಕಲ್ಲಂಗಡಿ ತೋಟಗಳು ಹಾನಿಗೊಳಗಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಬೇಸಿಗೆಯಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣನ ಆರ್ಭಟ ದೊಡ್ಡ ಹೊಡೆತ ನೀಡಿದೆ.

1 / 6
ಕಳೆದ ನಾಲ್ಕು–ಐದು ದಿನಗಳಿಂದ ನಿರಂತರವಾಗಿ ಸುರಿದ ಆಲಿಕಲ್ಲು ಮಳೆಯಿಂದ ಕಲ್ಲಂಗಡಿ ಹಣ್ಣುಗಳು ಹಾನಿಗೊಳಗೊಂಡಿವೆ. ಹೊಲದಲ್ಲೇ ಹಣ್ಣುಗಳು ಒಡೆದು ಹಾಳಾಗಿದ್ದು, ರಾಶಿ ರಾಶಿಯಾಗಿ ಕೊಳೆಯುತ್ತಿವೆ. ಉತ್ತಮ ಗುಣಮಟ್ಟದ ಹಣ್ಣುಗಳು ಸಂಪೂರ್ಣ ಹಾನಿಯಾಗಿರುವುದರಿಂದ ರೈತರಿಗೆ ಆರ್ಥಿಕ ನಷ್ಟ ಭಾರೀ ಪ್ರಮಾಣದಲ್ಲಿ ಉಂಟಾಗಿದೆ.

2 / 6
ಮಾರುಕಟ್ಟೆಯಲ್ಲಿ ಉತ್ತಮ ದರ ಸಿಗಬೇಕಿದ್ದ ಕಲ್ಲಂಗಡಿ ಹಣ್ಣುಗಳು ಈಗ ತೀವ್ರ ಹಾನಿಯಿಂದ ಬೆಲೆ ಕುಸಿದಿವೆ. ಕಿಲೋಗೆ 20 ರೂಪಾಯಿ ಸಿಗಬೇಕಿದ್ದ ಹಣ್ಣುಗಳನ್ನು 2 ರಿಂದ 3 ರೂಪಾಯಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಹಾಳಾದ ಹಣ್ಣುಗಳನ್ನು ಖರೀದಿಸಲು ವ್ಯಾಪಾರಿಗಳು ಮುಂದೆ ಬರುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

3 / 6
ನೂರಾರು ಎಕರೆಯಲ್ಲಿ ಬೆಳೆದ ಕಲ್ಲಂಗಡಿ ಬೆಳೆ ಸಂಪೂರ್ಣ ನಾಶ!

ಅಪಾರ ಪ್ರಮಾಣದಲ್ಲಿ ಹಾನಿಯಾದರೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂಪಾಯಿ ನಷ್ಟವಾದರೂ ಅಧಿಕಾರಿಗಳು ಸೌಜನ್ಯಕ್ಕೂ ಬರದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಶಿರಹಟ್ಟಿ ತೋಟಗಾರಿಕೆ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

4 / 6
ಒಂದು ಎಕರೆಗೆ ಸುಮಾರು 1.20 ಲಕ್ಷ ರೂಪಾಯಿ ವೆಚ್ಚ ಮಾಡಿ ಕಲ್ಲಂಗಡಿ ಬೆಳೆದ ರೈತರಿಗೆ ಭರ್ಜರಿ ಫಸಲು ಬಂದಿತ್ತು. ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಸಮಯದಲ್ಲೇ ಪ್ರಕೃತಿ ವಿಪತ್ತು ಸಂಭವಿಸಿ ಸಂಪೂರ್ಣ ಬೆಳೆ ಹಾನಿಯಾಗಿದೆ. ಹಣ್ಣುಗಳನ್ನು ನೆಲಕ್ಕೆ ಹೊಡೆದು ರೈತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

5 / 6
ಸಂಕಷ್ಟದಲ್ಲಿರುವ ರೈತರು ಸರ್ಕಾರದಿಂದ ತಕ್ಷಣ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಹಾನಿಗೊಳಗಾದ ಜಮೀನುಗಳನ್ನು ತ್ವರಿತವಾಗಿ ಸರ್ವೇ ಮಾಡಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ರೈತರ ಪರಿಸ್ಥಿತಿಯನ್ನು ಗಮನಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಹಾಗೂ ರೈತರ ಒಗ್ಗಟ್ಟಿನ ಆಗ್ರಹವಾಗಿದೆ.

6 / 6
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ