ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ

Edited By:

Updated on: May 01, 2026 | 8:36 PM

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದ ವನ್ಯಜೀವಿಗಳು ಬಳಲುತ್ತಿವೆ. ಬಿಸಿಲಿನ ಬೇಗೆಯಿಂದ ಪ್ರಾಣಿಗಳನ್ನು ರಕ್ಷಿಸಲು ಮೃಗಾಲಯ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಗ್ಲುಕೋಸ್, ತಂಪು ಆಹಾರ, ಐಸ್ ನೀರು ಮತ್ತು ಸ್ಪ್ರಿಂಕ್ಲರ್‌ಗಳನ್ನು ಒದಗಿಸುವ ಮೂಲಕ ಪ್ರಾಣಿಗಳಿಗೆ ತಂಪಾದ ವಾತಾವರಣ ಸೃಷ್ಟಿಸಲಾಗಿದೆ. ಇಲ್ಲಿವೆ ನೋಡಿ ಫೋಟೋಸ್​​.

1 / 6
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮನುಷ್ಯರ ಜೊತೆಗೆ ಪ್ರಾಣಿಗಳು ಸಹ ತತ್ತರಿಸಿವೆ. ಹೀಗಾಗಿ ಮೃಗಾಲಯದ ವನ್ಯಜೀವಿಗಳಿಗೆ ವಿಶೇಷ ಆರೈಕೆ ಮಾಡಲಾಗುತ್ತಿದೆ. ಇತ್ತ ಗದಗನ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿರುವ ಪ್ರಾಣಿಗಳ ರಕ್ಷಣೆಗೆ ಹೆಚ್ಚುವರಿ ಕಾಳಜಿ ವಹಿಸಲಾಗುತ್ತಿದೆ. ಅದಕ್ಕಾಗಿ ವಿಶೇಷ ಮುನ್ನೆಚ್ಚರಿಕೆ ಹಾಗೂ ಆರೈಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮನುಷ್ಯರ ಜೊತೆಗೆ ಪ್ರಾಣಿಗಳು ಸಹ ತತ್ತರಿಸಿವೆ. ಹೀಗಾಗಿ ಮೃಗಾಲಯದ ವನ್ಯಜೀವಿಗಳಿಗೆ ವಿಶೇಷ ಆರೈಕೆ ಮಾಡಲಾಗುತ್ತಿದೆ. ಇತ್ತ ಗದಗನ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿರುವ ಪ್ರಾಣಿಗಳ ರಕ್ಷಣೆಗೆ ಹೆಚ್ಚುವರಿ ಕಾಳಜಿ ವಹಿಸಲಾಗುತ್ತಿದೆ. ಅದಕ್ಕಾಗಿ ವಿಶೇಷ ಮುನ್ನೆಚ್ಚರಿಕೆ ಹಾಗೂ ಆರೈಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

2 / 6

ಗದಗನ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿರುವ ವನ್ಯಜೀವಿಗಳನ್ನು ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ಆರೈಕೆ ಮಾಡಲಾಗುತ್ತಿದೆ. ವೈದ್ಯರ ಸಲಹೆಯಂತೆ ಪ್ರಾಣಿಗಳಿಗೆ ಐಸ್ ಮಿಶ್ರಿತ ನೀರು, ತಂಪಾದ ಆಹಾರ ಮತ್ತು ಗ್ಲುಕೋಸ್ ನೀಡಲಾಗುತ್ತಿದ್ದು, ಸ್ಪ್ರಿಂಕ್ಲರ್ ಮೂಲಕ ತಂಪಾದ ವಾತಾವರಣ ಕಲ್ಪಿಸಲಾಗಿದೆ.

3 / 6

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

4 / 6

ಇನ್ನು ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದು, ಪ್ರಾಣಿಗಳ ರಕ್ಷಣೆಗೆ ಕೈಗೊಂಡಿರುವ ವ್ಯವಸ್ಥೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಣಿ-ಪಕ್ಷಿಗಳ ಕಲರವ ಕಂಡು ಫಿದಾ ಆಗಿದ್ದಾರೆ.

5 / 6

ಬಿಸಿಲು ಹೆಚ್ಚಾದರೂ ವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳು ಮಾನವೀಯತೆಗೂ, ಪರಿಸರ ಸಂರಕ್ಷಣೆಗೂ ಉತ್ತಮ ಉದಾಹರಣೆಯಾಗಿದೆ.

6 / 6

ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದ ಅಧಿಕಾರಿಗಳು ಮತ್ತು ಸಿಬಂದಿ ಮಾಡುತ್ತಿರುವ ಈ ಒಳ್ಳೆಯ ಕೆಲಸಕ್ಕೆ ಪ್ರಾಣಿ ಪ್ರಿಯರು ಭೇಷ್ ಎಂದಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us