ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

Updated on: Sep 02, 2024 | 10:48 PM

ಕರುನಾಡಿನಲ್ಲಿ ಪ್ರೇಕ್ಷಕರ ಮನಗೆದ್ದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ದುಬೈನಲ್ಲಿ ಇರುವ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. ಅಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ‘ಗೋಲ್ಡನ್​ ಸ್ಟಾರ್​’ ಗಣೇಶ್​, ಮಾಳವಿಕಾ ನಾಯರ್​ ಸೇರಿದಂತೆ ಹಲವು ಕಲಾವಿದರು ಭಾಗಿ ಆಗಿದ್ದಾರೆ. ವಿದೇಶದಲ್ಲಿ ಸಿಕ್ಕ ಪ್ರೋತ್ಸಾಹಕ್ಕೆ ಗಣೇಶ್​ ಧನ್ಯವಾದ ತಿಳಿಸಿದ್ದಾರೆ.

1 / 5
ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ.

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ.

2 / 5

‘ಗೋಲ್ಡನ್ ಸ್ಟಾರ್’ ಗಣೇಶ್ ನಾಯಕರಾಗಿ ಅಭಿನಯಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕರ್ನಾಟಕದಲ್ಲಿ ಸೂಪರ್​ ಹಿಟ್​ ಆದ ಬೆನ್ನಲ್ಲೇ ಅಬುದಾಬಿ ಮತ್ತು ದುಬೈನಲ್ಲೂ ಪ್ರದರ್ಶನ ಕಂಡಿದೆ. ಆ ಫೋಟೋಗಳು ಲಭ್ಯವಾಗಿವೆ.

3 / 5

ದುಬೈನಲ್ಲಿ ಇರುವ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಇತ್ತೀಚೆಗೆ ರಶ್ಮಿ ವೆಂಕಟೇಶ್, ಸೆಂದಿಲ್ ಹಾಗೂ ತಂಡದವರು ಈ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

4 / 5

ವಿಶೇಷ ಪ್ರದರ್ಶನದಲ್ಲಿ ಗಣೇಶ್, ಮಾಳವಿಕಾ ನಾಯರ್, ರಂಗಾಯಣ ರಘು, ಶ್ರೀನಿವಾಸ್​ ರಾಜು, ಪ್ರಶಾಂತ್ ಜಿ. ರುದ್ರಪ್ಪ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಿದ್ದರು. ವಿದೇಶದಲ್ಲಿ ಕನ್ನಡದ ಕಂಪು ಹರಡಿದರು.

5 / 5

ಅಂದಾಜು 750ಕ್ಕೂ ಅಧಿಕ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದರು. ಸಿನಿಮಾದ ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿಪಟ್ಟರು. ‘ನೀವು ನೀಡಿದ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ’ ಎಂದರು ಗಣೇಶ್.

Loading...
Unable to load recommendations.
Follow Us