ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ಮುಂಜಾನೆ 3 ಗಂಟೆಯಿಂದ ಗಣಪನಿಗೆ ವಿಶೇಷ ಪೂಜೆ ನಡೆಯುತ್ತಿದೆ. ಗಣಪನಿಗೆ ಕ್ಷೀರಾಭಿಷೇಕ, ಮೊಸರು ಹಾಗೂ ಪಂಚಾಮೃತ ಅಭಿಷೇಕ, ಹಾಗೂ ಇಂದು ವಿಶೇಷವಾಗಿ ಗಣಪನಿಗೆ ನಾಣ್ಯಗಳಿಂದ ಅಭಿಷೇಕ ಮಾಡಲಾಯಿತು. ಈ ಹಿನ್ನಲೆ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.