ನಟಿ ಸಾಯಿ ಪಲ್ಲವಿ ಅವರು ಆಡಂಬರಕ್ಕಿಂತಲೂ ಸರಳತೆಗೆ ಹೆಚ್ಚು ಮಹತ್ವ ನೀಡುತ್ತಾರೆ. ಆ ಕಾರಣದಿಂದಲೇ ಅವರನ್ನು ಅಭಿಮಾನಿಗಳು ಹೆಚ್ಚು ಇಷ್ಟಪಡುತ್ತಾರೆ. ದೇಶಾದ್ಯಂತ ಅವರಿಗೆ ಫ್ಯಾನ್ಸ್ ಇದ್ದಾರೆ.
ಸಾಯಿ ಪಲ್ಲವಿ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಿಂಪಲ್ ಸೀರೆ ಧರಿಸಿ ಅವರು ಮಿಂಚಿದ್ದಾರೆ. ಅಭಿಮಾನಿಗಳು ಈ ಫೋಟೋಗಳಿಗೆ ಸಖತ್ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಗ್ಲಾಮರ್ಗೆ ಸಾಯಿ ಪಲ್ಲವಿ ಎಂದಿಗೂ ಮೊದಲ ಆದ್ಯತೆ ನೀಡಿದವರಲ್ಲ. ಪ್ರಬುದ್ಧ ನಟನೆಯಿಂದಲೇ ಜನರನ್ನು ಅವರು ಸೆಳೆದುಕೊಂಡಿದ್ದಾರೆ. ಹಲವು ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್ ಮಾಡಲಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದೆ.
‘ಗಾರ್ಗಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ.
Published On - 12:51 pm, Fri, 1 July 22