ಉಡುಪಿ: ವೈಭವದ ವಿಟ್ಲಪಿಂಡಿ ಮಹೋತ್ಸವ ಸಂಪನ್ನ; ಇಲ್ಲಿವೆ ಫೋಟೋಸ್
ಚಿನ್ನದ ತೇರಿನಲ್ಲಿ ಬಾಲಕೃಷ್ಣನ ಮೆರವಣಿಗೆ, ಗೊಲ್ಲರು ಮೊಸರಿನ ಕುಡಿಕೆಗಳನ್ನು ಒಡೆಯುತ್ತಾ ಸಾಗುವ ಸಾಂಪ್ರದಾಯಿಕ ನಡೆ. ಕಣ್ಮಣಿಯಾದ ಕಡಗೋಲು ಕೃಷ್ಣ, ಅಷ್ಟಮಠಗಳ ರಥ ಬೀದಿಯಲ್ಲಿ ತನ್ನ ಲೀಲೋತ್ಸವಗಳನ್ನು ತೋರಿಸುತ್ತಾ ಸಾಗಿಬಂದಾಗ ಭಕ್ತರಿಗೆ ಖುಷಿಯೋ ಖುಷಿ! ಹೌದು, ಉಡುಪಿಯಲ್ಲಿ ಅಷ್ಟಮಿಯ ಪ್ರಯುಕ್ತ ನಡೆಯುವ ವಿಟ್ಲಪಿಂಡಿ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು.