‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್
ಗೋಲ್ಡನ್ ಸ್ಟಾರ್ ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಬಳಿಕ ಅವರು ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ‘ಬೃಂದಾವಿಹಾರಿ’ ಸಿನಿಮಾ ಮೂಲಕ ಬರೋಕೆ ರೆಡಿ ಆಗಿದ್ದಾರೆ. ಅವರ ಹೊಸ ಸಿನಿಮಾ ಟೈಟಲ್ ಗಮನ ಸೆಳೆದಿದೆ.
Updated on: Mar 19, 2026 | 12:29 PM

ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದರು. ಆ ಬಳಿಕ ಅವರು ‘ಪಿನಾಕ’ ಹೆಸರಿನ ಸಿನಿಮಾ ಒಪ್ಪಿಕೊಂಡರು. ಈಗ ಬ್ಯಾಕ್ ಟು ಬ್ಯಾಕ್ ಹೊಸ ಸಿನಿಮಾನ ಅವರು ಘೋಷಣೆ ಮಾಡಿದ್ದಾರೆ.

ಇತ್ತೀಚೆಗೆ ‘ತಮ್ಮ ಸುಖಾಗಮನ ಬಯಸುವ’ ಹೆಸರಿನ ಹೊಸ ಚಿತ್ರವನ್ನು ಗಣೇಶ್ ಅನೌನ್ಸ್ ಮಾಡಿದ್ದರು. ಈಗ ಅವರು ‘ಬೃಂದಾವಿಹಾರಿ’ ಹೆಸರಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಯುಗಾದಿಗೆ ಈ ಚಿತ್ರ ಅನೌನ್ಸ್ ಆಗಿದೆ.

ಶ್ರೀನಿವಾಸ್ ರಾಜು ಅವರು ‘ಬೃಂದಾವಿಹಾರಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಮೃದ್ಧಿ ಮಂಜುನಾಥ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಗಣೇಶ್ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

‘ಬೃಂದಾವಿಹಾರಿ’ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ. ಈ ಸಿನಿಮಾದ ಟೈಟಲ್ ಯುಗಾದಿ ಅನೌನ್ಸ್ ಆಗಲಿದೆ ಎಂಬ ವಿಷಯವನನು ಗಣೇಶ್ ಇತ್ತೀಚೆಗೆ ರಿವೀಲ್ ಮಾಡಿದ್ದರು. ಫನ್ ವಿಡಿಯೋ ಮೂಲಕ ವಿಷಯವನ್ನು ತಿಳಿಸಲಾಗಿತ್ತು.

ಕಳೆದ ವರ್ಷ ಗಣೇಶ್ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿರಲಿಲ್ಲ. ಈ ವರ್ಷ ಅವರ ನಟನೆಯ ಎರಡು ಚಿತ್ರಗಳು ರಿಲೀಸ್ ಆಗಲಿವೆಯೇ ಎಂಬ ಪ್ರಶ್ನೆ ಮೂಡಿದೆ.




