ತುಳು, ಕನ್ನಡ ‘ಟಾಸ್’ ಸಿನಿಮಾಗೆ ಸಾಥ್ ನೀಡಿದ ‘ಗೋಲ್ಡನ್ ಸ್ಟಾರ್’ ಗಣೇಶ್, ಶಿಲ್ಪಾ

Updated on: Aug 18, 2026 | 4:11 PM

ಏಕಕಾಲಕ್ಕೆ ಕನ್ನಡ ಮತ್ತು ತುಳು ಭಾಷೆಯಲ್ಲಿ ನಿರ್ಮಾಣ ಆಗಿರುವ ‘ಟಾಸ್’ ಸಿನಿಮಾಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರು ಸಾಥ್ ನೀಡಿದ್ದಾರೆ. ‘ಗೋಲ್ಡನ್ ಮೂವೀಸ್’ ಮೂಲಕ ಗಣೇಶ್ ಮತ್ತು ಶಿಲ್ಪಾ ಗಣೇಶ್ ಅವರು ಈ ಚಿತ್ರವನ್ನು ರಿಲೀಸ್ ಮಾಡಲಿದ್ದಾರೆ. ಸೆಪ್ಟೆಂಬರ್ 18ಕ್ಕೆ ರಾಜ್ಯಾದ್ಯಂತ ಎರಡೂ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

1 / 5
ಅರ್ಜುನ್ ದೇವ್ ಹೀರೋ ಆಗಿ ನಟಿಸಿರುವ ‘ಟಾಸ್’ ಸಿನಿಮಾ ತುಳು ಮತ್ತು ಕನ್ನಡದಲ್ಲಿ ನಿರ್ಮಾಣ ಆಗಿದೆ. ಈ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ‘ಗೋಲ್ಡನ್ ಸ್ಟಾರ್’ ಗಣೇಶ್ ಮತ್ತು ಶಿಲ್ಪಾ ಗಣೇಶ್ ಅವರು ‘ಗೋಲ್ಡನ್ ಮೂವೀಸ್’ ಬ್ಯಾನರ್ ಮೂಲಕ ಅರ್ಪಿಸಲು ಮುಂದಾಗಿದ್ದಾರೆ.

ಅರ್ಜುನ್ ದೇವ್ ಹೀರೋ ಆಗಿ ನಟಿಸಿರುವ ‘ಟಾಸ್’ ಸಿನಿಮಾ ತುಳು ಮತ್ತು ಕನ್ನಡದಲ್ಲಿ ನಿರ್ಮಾಣ ಆಗಿದೆ. ಈ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ‘ಗೋಲ್ಡನ್ ಸ್ಟಾರ್’ ಗಣೇಶ್ ಮತ್ತು ಶಿಲ್ಪಾ ಗಣೇಶ್ ಅವರು ‘ಗೋಲ್ಡನ್ ಮೂವೀಸ್’ ಬ್ಯಾನರ್ ಮೂಲಕ ಅರ್ಪಿಸಲು ಮುಂದಾಗಿದ್ದಾರೆ.

2 / 5

‘ಟಾಸ್’ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಅದರ ಮೊದಲ ಹಂತವಾಗಿ ‘ಹೆಲೋ ಹೆಲೋ ನೀಲಾಂಬರಿ..’ ಎಂಬ ಹಾಡನ್ನು ರಿಲೀಸ್ ಮಾಡಲಾಗಿದೆ. ಡ್ಯುಯೆಟ್ ಹಾಡಲ್ಲಿ ಹೀರೋ ಅರ್ಜುನ್ ದೇವ್ ಮತ್ತು ನಾಯಕಿ ಸುತೇಜ್ ಶೆಟ್ಟಿ ಅವರ ಕೆಮಿಸ್ಟ್ರಿ ಕಾಣಿಸಿದೆ.

3 / 5

ಮಣಿಕಾಂತ್ ಕದ್ರಿ ಅವರ ಸಂಗೀತ, ಯೋಗರಾಜ್ ಭಟ್ ಅವರ ಸಾಹಿತ್ಯವಿರುವ ಈ ಹಾಡನ್ನ ಅರ್ಮಾನ್ ಮಲಿಕ್ ಹಾಡಿದ್ದಾರೆ. ‘ಆನಂದ್ ಆಡಿಯೋ’ ಮೂಲಕ ‘ಹೆಲೋ ಹೆಲೋ ನೀಲಾಂಬರಿ..’ ಹಾಡು ಕನ್ನಡ ಮತ್ತು ತುಳು ಭಾಷೆಯಲ್ಲಿ ಲಭ್ಯವಾಗಿದೆ.

4 / 5

ಈ ಸಿನಿಮಾವನ್ನು ‘ಅವಿಕಾ ಪ್ರೊಡಕ್ಷನ್ಸ್’ ಮತ್ತು ‘ಬಿ.ಆರ್.ಬಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗಿದೆ. ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಜೋಯೆಲ್ ಶರ್ಮನ್ ಡಿಸೋಜಾ ಛಾಯಾಗ್ರಹಣ, ಯಾಶ್ವಿನ್ ಕೆ. ಶೆಟ್ಟಿಗೇರ್ ಸಂಕಲನ ಈ ಚಿತ್ರಕ್ಕಿದೆ.

5 / 5

‘ಸು ಫ್ರಮ್ ಸೋ’ ಖ್ಯಾತಿಯ ಶನೀಲ್ ಗೌತಮ್ ಅವರು ‘ಟಾಸ್’ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾವನ್ನು ಸೆಪ್ಟೆಂಬರ್ 18ರಂದು ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

Published On - 4:10 pm, Tue, 18 August 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us