Google Pixel 6a: ಭಾರತದಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬೆಲೆ ಬಹಿರಂಗ: ಎಷ್ಟು ಗೊತ್ತೇ?
TV9 Web | Updated By: Vinay Bhat
Updated on:
Jul 19, 2022 | 1:58 PM
Google Pixel 6a Price in india: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ ಫೋನ್ ಗೆ ಭಾರತದಲ್ಲಿ ಎಷ್ಟು ರೂ. ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದೆ ಇದರ ಬೆಲೆ 40,000 ರೂ. ಇರಬಹುದು ಎಂದು ಹೇಳಲಾಗಿತ್ತು.
1 / 7
ಭಾರತದಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್ ಪೋನ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಅಥವಾ ಇದೇ ತಿಂಗಳ ಅಂತ್ಯದಲ್ಲಿ ಪಿಕ್ಸೆಲ್ 6a ಸ್ಮಾರ್ಟ್ ಫೋನ್ ಬಿಡುಗಡೆ ಕಾರ್ಯಕ್ರಮ ಜರುಗಲಿದೆಯಂತೆ.
2 / 7
ಹೀಗಿರುವಾಗ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ ಫೋನ್ ಗೆ ಭಾರತದಲ್ಲಿ ಎಷ್ಟು ರೂ. ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದೆ ಇದರ ಬೆಲೆ 40,000 ರೂ. ಇರಬಹುದು ಎಂದು ಹೇಳಲಾಗಿತ್ತು. ಆದರೀಗ ಇದು 37,000 ರೂ. ಗೆ ಭಾರತದಲ್ಲಿ ಮಾರಾಟ ಆಗಲಿದೆ ಎಂದು ತಿಳಿದುಬಂದಿದೆ.
3 / 7
ಈ ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ.
4 / 7
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ ಫೋನ್ 6.1 ಇಂಚಿನ ಫುಲ್ HD+ OLED ಡಿಸ್ ಪ್ಲೇಯನ್ನು ಹೊಂದಿದೆ. ಈ ಡಿಸ್ ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
5 / 7
ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
6 / 7
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
7 / 7
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 4,410mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ.