- Kannada News Photo gallery Google Pixel 6a is now available on Flipkart for just Rs 27999 dont miss this offer
ತಕ್ಷಣ ಬುಕ್ ಮಾಡಿ: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಮಾರಾಟ
Google Pixel 6a price slashed: ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಕಂಪನಿಯ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಊಹಿಸಲಾಗದ ದರಕ್ಕೆ ಸೇಲ್ ಆಗುತ್ತಿದೆ. 43,999 ರೂ. ಗೆ ಅನಾವರಣಗೊಂಡ ಈ ಫೋನನ್ನು ಇದೀಗ ಅತಿ ಕಡಿಮೆ ಬೆಲೆಗೆ ನಿಮ್ಮದಾಗಿಸಬಹುದು. ಈ ಆಫರ್ ಎಷ್ಟು ದಿನ ಇರಲಿದೆ ಎಂಬುದು ಬಹಿರಂಗವಾಗಿಲ್ಲ.
Updated on: Aug 26, 2023 | 6:55 AM

ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಯಾವುದೇ ಸೇಲ್ ನಡೆಯುತ್ತಿಲ್ಲ. ಹೀಗಿದ್ದರೂ ಇದರಲ್ಲಿ ಸ್ಮಾರ್ಟ್ಫೋನ್ಗಳು ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳು ಬಂಪರ್ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ. ಆ್ಯಪಲ್, ಸ್ಯಾಮ್ಸಂಗ್, ಗೂಗಲ್ ಸೇರಿದಂತೆ ಅನೇಕ ಸ್ಮಾರ್ಟ್‌ಫೋನ್ ಬ್ರ್ಯಾಂಡ್ಗಳ ಮೇಲೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಆಗುತ್ತಿದೆ.

ಮುಖ್ಯವಾಗಿ ಸದ್ಯ ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಕಂಪನಿಯ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್‌ಫೋನ್ ಊಹಿಸಲಾಗದ ದರಕ್ಕೆ ಸೇಲ್ ಆಗುತ್ತಿದೆ. 43,999 ರೂ. ಗೆ ಅನಾವರಣಗೊಂಡ ಈ ಫೋನನ್ನು ಇದೀಗ ಅತಿ ಕಡಿಮೆ ಬೆಲೆಗೆ ನಿಮ್ಮದಾಗಿಸಬಹುದು. ಈ ಆಫರ್ ಎಷ್ಟು ದಿನ ಇರಲಿದೆ ಎಂಬುದು ಬಹಿರಂಗವಾಗಿಲ್ಲ.

ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಮೇಲೆ ಶೇ. 38 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ಮೂಲಕ ಡಿಸ್ಕೌಂಟ್ ಪಡೆದುಕೊಂಡು 26,999 ರೂ. ಗೆ ಸೇಲ್ ಆಗುತ್ತಿದೆ. 17,000 ರೂ. ಗಳ ರಿಯಾಯಿತಿ ನೀಡಲಾಗಿದೆ. ಇದರ ಜೊತೆಗೆ ನೀವು ಹೆಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಡ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ಗಳ ರಿಯಾಯಿತಿ ಪಡೆಯಬಹುದು.

ಇಷ್ಟೇ ಅಲ್ಲದೆ 25,900 ರೂ. ವರಗಿನ ಎಕ್ಸ್ಚೇಂಜ್ ಆಫರ್ ಕೂಡ ಘೋಷಿಸಲಾಗಿದೆ. ನಿಮ್ಮ ಹಳೆಯ ಫೋನ್ ಪಿಕ್ಸೆಲ್ ಫೋನ್ಗೆ ಹೋಲಿಕೆ ಆಗುವಂತಿದ್ದು, ಉತ್ತಮ ಕಂಡಿಷನ್ನಲ್ಲಿದ್ದರೆ ಎಕ್ಸ್ಚೇಂಜ್ ಆಫರ್, ಬ್ಯಾಂಕ್ ಆಫರ್ ಮೂಲಕ ಅತಿ ಕಡಿಮೆ ಬೆಲೆಗೆ ಪಿಕ್ಸೆಲ್ 6a ನಿಮ್ಮದಾಗಿಸಬಹುದು. ಇದು 6 GB RAM + 128GB ಸ್ಟೋರೇಜ್‌ನ ವೇರಿಯಂಟ್ ಆಗಿದೆ.

ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಆಕ್ಟಾ-ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ಕೂಡ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಫೋನ್‌ನ ರಿಯರ್ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.

ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜರ್ ಆಯ್ಕೆ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.



















