- Kannada News Photo gallery government school building collapses in shivajinagar at Bengaluru crushes vehicles
ಚಿತ್ರಗಳು: ಬೆಂಗಳೂರಿನಲ್ಲಿ ನರ್ಸರಿ ಶಾಲೆ ಕಟ್ಟಡ ಕುಸಿತ, ವಾಹನಗಳು ಜಖಂ
ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.
Updated on: Nov 27, 2023 | 1:05 PM

ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ.

ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್. ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು

ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದರಿಂದ ಸಂಭವಿಸಬೇಕಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯಾರ್ಥಿಗಳ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

ಇನ್ನು ಶಾಲಾ ಕಟ್ಟದ ಅವಶೇಷಗಳ ಅಡಿಯಲ್ಲಿ ವಾಹನಗಳು ಸಿಲುಕಿದ್ದು, ಅವು ಸಂಪೂರ್ಣವಾಗಿ ಹಾನಿಯಾಗಿವೆ. ಇದರಿಂದ ಮಾಲೀಕರು ಕಂಗಾಲಾಗಿದ್ದಾರೆ.

ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ.

ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ. ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
























