
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿಗೆ ಆಗಮಿಸಿ ತಾಯಿ ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದಾರೆ.

ಅಲ್ಲದೆ ಕುಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ ಕೂಡ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೊರನಾಡು ದೇವಸ್ಥಾನದ ಅಡಳಿತ ಮಂಡಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವನ್ನು ಆದರದಿಂದ ಸ್ವಾಗತಿಸಿದರು.

ಡಿಸಿ ಕೆ.ಎನ್.ರಮೇಶ್, ಎಸ್ಪಿ ಉಮಾಪ್ರಶಾಂತ್ ಹಾಗೂ ಅಧಿಕಾರಿಗಳು ರಾಜ್ಯಪಾಲರಿಗೆ ಸಾಥ್ ನೀಡಿದರು. ರಾಜ್ಯಪಾಲರ ಭೇಟಿ ಹಿನ್ನೆಲೆ ಭಕ್ತರಿಗೆ ಅವಕಾಶ ಇರಲಿಲ್ಲ.

ಇನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ “ಮಾದಕ ಮುಕ್ತರಿಗೆ ಹೊಸ ಜೀವನ” ಎಂಬ ವಿಷಯದ ಕುರಿತು ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿದರ.
Published On - 3:19 pm, Thu, 16 February 23