AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ

ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ, ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಡ್ಯಾಂನಿಂದ ಈಗ ನದಿಗೆ ಲಕ್ಷ ಕ್ಯೂಸೆಕ್​​ನಷ್ಟು ನೀರು ಬಿಡಲಾಗುತ್ತಿದೆ. ಇದರಿಂದ ಹಂಪಿಯ ಐತಿಹಾಸಿಕ ಸ್ಮಾರಕಗಳು ನೀರಲ್ಲಿ ಮುಳುಗಡೆ.

ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ

Updated on: Jul 27, 2024 | 2:52 PM

Hampi Many temples were drowned except the Virupaksha temple Vijayanagar News in Kannada

ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ, ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯದಿಂದ ನದಿಗೆ ಅಪಾರ ನೀರು ಬಿಡಲಾಗುತ್ತಿದೆ. ಡ್ಯಾಂನಿಂದ ಈಗ ನದಿಗೆ ಲಕ್ಷ ಕ್ಯೂಸೆಕ್​​ನಷ್ಟು ನೀರು ಬಿಡಲಾಗುತ್ತಿದೆ. ಇದರಿಂದ ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಶುರುವಾಗಿದೆ.

1 / 6
Hampi Many temples were drowned except the Virupaksha temple Vijayanagar News in Kannada

ಜಲಾಶಯದಿಂದ 1.17 ಲಕ್ಷ ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನಲೆಯಲ್ಲಿ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ‌ಹರಿಯುತ್ತಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಂಪಿಯಿಂದ ವಿರಾಪುರ ಗಡ್ಡೆಗೆ ಬೋಟ್ ಸಂಪರ್ಕ ಸ್ಥಗಿತವಾಗಿದೆ.

2 / 6
Hampi Many temples were drowned except the Virupaksha temple Vijayanagar News in Kannada

ನದಿಯಲ್ಲಿ ಹಂಪಿಯ ಹಲವು ಐತಿಹಾಸಿಕ ಸ್ಮಾರಗಳು ಮುಳುಗಡೆಯಾಗಿವೆ. ಹಂಪಿಯ ವಿಧಿ – ವಿಧಾನ ಮಂಟಪ, ಪುರಂದರದಾಸ ಮಂಟಪಗಳು ಮುಳುಗಡೆಯಾಗಿವೆ.

3 / 6
Hampi Many temples were drowned except the Virupaksha temple Vijayanagar News in Kannada

ಹಂಪಿಯ ಮುಖ್ಯ ದೇವಸ್ಥಾನವಾದ ವಿರೂಪಾಕ್ಷೇಶ್ವರನ ದರ್ಶನ ಪಡೆದು ಅಲ್ಲಿಂದ ಸಾಲು ಮಂಟಪಗಳ ಬೀದಿಯಲ್ಲಿ ಸಾಗಿ ಅಲ್ಲಿಂದ ಕೋದಂಡರಾಮ ದೇವಸ್ಥಾನ, ಸೀತಾಸೆರಿಗೂ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನ ಹಲವು ದೇವಸ್ಥಾನಗಳಿಗೆ ಹೋಗುವ ಮಾರ್ಗ ಸಂಪೂರ್ಣ ಜಲಾವೃತವಾಗಿದೆ.

4 / 6
Hampi Many temples were drowned except the Virupaksha temple Vijayanagar News in Kannada

ಪ್ರವಾಸಿಗರು ಈ ಮಾರ್ಗ ಬದಲಿಗೆ, ನೇರವಾಗಿ ಮುಖ್ಯ ವೇದಿಕೆ ದಾರಿಯಲ್ಲಿ 3 ಕಿಮೀ ಕಾಲ್ನಡಿಗೆಯಲ್ಲಿ ಸಾಗಿ ಉಳಿದ ದೇವಸ್ಥಾನಗಳ ದರ್ಶನ ಪಡೆಯಬೇಕಾಗಿದೆ.

5 / 6
Hampi Many temples were drowned except the Virupaksha temple Vijayanagar News in Kannada

ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಕಂಪ್ಲಿ ಸೇತುವೆ ಮುಳುಗಡೆಯಾಗಿ, ಕಂಪ್ಲಿ-ಗಂಗಾವತಿ ಸಂಪರ್ಕ ಬಂದ್​ ಆಗಿದೆ. ಸಿರುಗುಪ್ಪ ತಾಲೂಕಿನ ವಿವಿಧೆಡೆ ಜಮೀನಿಗೆ ನೀರು ನುಗ್ಗಿದೆ. ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಟಿಬಿ ಡ್ಯಾಂನಿಂದ ಹೊರಗೆ ಬಿಟ್ಟರೆ ಕಂಪ್ಲಿ ಕೋಟೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ನದಿಗೆ ಇಳಿಯದಂತೆ ಜಿಲ್ಲಾಡಳಿತ ಜನರಿಗೆ ಸೂಚನೆ ನೀಡಿದೆ.

6 / 6
Follow us
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​