ಹನ್ಸಿಕಾ ಮೋಟ್ವಾನಿ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ತೆಲುಗು, ತಮಿಳು ಭಾಷೆಗಳಲ್ಲಿ ಹನ್ಸಿಕಾ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ.
ಅಲ್ಲು ಅರ್ಜುನ್ ಅಭಿನಯದ ‘ದೇಶಮುದುರು’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಸೂಪರ್ ಸಕ್ಸಸ್ ಪಡೆದ ಹನ್ಸಿಕಾಗೆ ತೆಲುಗಿನಲ್ಲಿ ಹಲವು ಆಫರ್ಗಳು ಬಂದಿವೆ. ಟಾಪ್ ಹೀರೋಗಳ ಜೊತೆಯೂ ನಟಿಸಿದ್ದಾರೆ.
ಹನ್ಸಿಕಾ ತೆಲುಗಿಗಿಂತ ಹೆಚ್ಚು ತಮಿಳು ಸಿನಿಮಾ ಮಾಡಿದ್ದಾರೆ. ತಮಿಳಿನಲ್ಲಿ ಸಾಲು ಸಾಲು ಚಿತ್ರಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಬೇಡಿಕೆ ಇರುವಾಗಲೇ ಅವರು ಮದುವೆ ಆಗಿದ್ದಾರೆ.
ಹನ್ಸಿಕಾ ಮೋಟ್ವಾನಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿ ಆಗಿದ್ದರು. ತೆಲುಗು ಚಿತ್ರರಂಗದಲ್ಲಿ ಕಿರುಕುಳ ಅನುಭವಿಸಿದ್ದೇನೆ ಎಂದು ಹೇಳಿದ್ದರು.
‘ತೆಲುಗಿನಲ್ಲಿ ಒಬ್ಬ ಹೀರೋ ತನಗೆ ತುಂಬಾ ಕಿರಿಕಿರಿ ಮಾಡುತ್ತಿದ್ದ. ಅವರಿಂದ ಕಾಸ್ಟಿಂಗ್ ಕೌಚ್ ಎದುರಿಸಿದ್ದೆ’ ಎಂದು ಅವರು ಹೇಳಿದ್ದರು. ಆದರೆ, ಆ ಹೀರೋ ಯಾರು ಎಂಬುದನ್ನು ಅವರು ರಿವೀಲ್ ಮಾಡಿಲ್ಲ.
ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಆ ಹೀರೋ ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.