‘ಬಿಂದಾಸ್’ ನಟಿಯ ಬೀಚ್ ಫೋಟೋಸ್; ಕಡಲ ತೀರದಲ್ಲಿ ನಿಂತು ಪೋಸ್ ನೀಡಿದ ಹನ್ಸಿಕಾ ಮೋಟ್ವಾನಿ
ಇನ್ಸ್ಟಾಗ್ರಾಮ್ನಲ್ಲಿ ಹನ್ಸಿಕಾ ಮೋಟ್ವಾನಿ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಮಾಹಿತಿ ನೀಡುತ್ತಾರೆ. ಈಗ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಇವು ಅಭಿಮಾನಿಗಳ ಗಮನ ಸೆಳೆಯುತ್ತಿವೆ.
1 / 7
ನಟಿ ಹನ್ಸಿಕಾ ಮೋಟ್ವಾನಿ ಅವರು ಬಹುಭಾಷೆಯಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸಿನಿಮಾ ಪ್ರೇಕ್ಷಕರಿಗೆ ಅವರು ಪರಿಚಿತರಾಗಿದ್ದಾರೆ. ಆಗಾಗ ಅವರು ಸುದ್ದಿ ಆಗುತ್ತಾರೆ.
2 / 7
ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಸೊಹೈಲ್ ಕಥುರಿಯಾ ಜೊತೆ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ನಡುವೆ ಅವರ ಕೆಲವು ಫೋಟೋಗಳು ವೈರಲ್ ಆಗಿವೆ.
3 / 7
ಅನೇಕ ಸಿನಿಮಾಗಳಲ್ಲಿ ಹನ್ಸಿಕಾ ಮೋಟ್ವಾನಿ ಬ್ಯುಸಿ ಆಗಿದ್ದಾರೆ. ಆ ಕೆಲಸಗಳಿಂದ ಕೊಂಚ ಬಿಡುವು ಮಾಡಿಕೊಂಡು ಅವರು ರಜೆಯ ಮಜ ಸವಿಯುತ್ತಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ ನೀಡಿದ್ದಾರೆ.
4 / 7
ಇನ್ಸ್ಟಾಗ್ರಾಮ್ನಲ್ಲಿ ಹನ್ಸಿಕಾ ಮೋಟ್ವಾನಿ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಮಾಹಿತಿ ನೀಡುತ್ತಾರೆ. ಈಗ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಇವು ಅಭಿಮಾನಿಗಳ ಗಮನ ಸೆಳೆಯುತ್ತಿವೆ.
5 / 7
ಸಮುದ್ರದ ತೀರದಲ್ಲಿ ನಿಂತು ಹನ್ಸಿಕಾ ಮೋಟ್ವಾನಿ ಅವರು ಪೋಸ್ ನೀಡಿದ್ದಾರೆ. ಅಲ್ಲಿ ಅವರು ಖುಷಿಖುಷಿಯಾಗಿ ಕಾಲ ಕಳೆದಿದ್ದಾರೆ. ಸದ್ಯ ಅವರು ಟರ್ಕಿಗೆ ತೆರಳಿದ್ದು, ಅಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ.
6 / 7
ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ನಟಿಸಿದ ‘ಬಿಂದಾಸ್’ ಸಿನಿಮಾ 2008ರಲ್ಲಿ ಬಿಡುಗಡೆ ಆಯಿತು. ಆ ಸಿನಿಮಾದಲ್ಲಿ ಹನ್ಸಿಕಾ ಮೋಟ್ವಾನಿ ಅವರು ನಾಯಕಿಯಾಗಿ ಅಭಿನಯಿಸಿದ್ದರು. ಆ ಬಳಿಕ ಅವರು ಕನ್ನಡದ ಬೇರೆ ಯಾವುದೇ ಚಿತ್ರದಲ್ಲಿ ನಟಿಸಲಿಲ್ಲ.
7 / 7
ಹನ್ಸಿಕಾ ಮೋಟ್ವಾನಿ ಅವರಿಗೆ ಈಗ 32 ವರ್ಷ ವಯಸ್ಸು. ಹಲವು ಸಿನಿಮಾಗಳು ಅವರ ಕೈಯಲ್ಲಿವೆ ಇವೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 59 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ವೆಬ್ ಸಿರೀಸ್ನಲ್ಲೂ ಹನ್ಸಿಕಾ ಮೋಟ್ವಾನಿ ಅವರು ನಟಿಸುತ್ತಿದ್ದಾರೆ.