ಡಿ.26 ರಂದು ಹುಣಸೂರಿನಲ್ಲಿ ಹನುಮ ಜಯಂತಿ, ಶಾಲಾ-ಕಾಲೇಜುಗಳಿಗೆ ರಜೆ
ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ. ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.
Updated on:Dec 26, 2023 | 6:24 AM

ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ.

ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಸರಸ್ವತಿಪುರಂ, ವಿಶ್ವೇಶ್ವರ ಪುರಂ, ಕರಿಗೌಡರ ಬೀದಿ, ಗರಡಿಮನೆ, ಮೋಚಿ ಬೀದಿ, ಗಣೇಶಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಲಿದೆ.

ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಮತ್ತು ಜಾನಪದ ತಂಡಗಳು ಭಾಗಿಯಾಗಲಿವೆ.

ಹನುಮ ಜಯಂತಿ ಆಚರಣೆ ಹಿನ್ನೆಲಯಲ್ಲಿ ಹುಣಸೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Published On - 7:57 am, Mon, 25 December 23

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
Read More