ಭಾರತದ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ಈ ಫೋಟೋಗಳನ್ನು ಈ ಜೋಡಿ ಹಂಚಿಕೊಂಡಿದೆ.
ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಎಂಗೇಜ್ಮೆಂಟ್ ಮಾಡಿಕೊಂಡರು. ಆದರೆ, ಮದುವೆ ಆಗಿರಲಿಲ್ಲ. ನಂತರ ನತಾಶಾ ಗಂಡುಮಗುವಿಗೆ ಜನ್ಮನೀಡಿದರು. ಈಗ ಇವರು ರಾಜಸ್ಥಾನದ ಜೈಪುರದಲ್ಲಿ ಮದುವೆ ಆಗಿದ್ದಾರೆ.
ಹಾರ್ದಿಕ್ ಹಾಗೂ ನತಾಶಾ ಫೆಬ್ರವರಿ 14ರಂದು ಮದುವೆ ಆಗಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮದುವೆ ಆದ ಬಳಿಕ ಮಗು ಮಾಡಿಕೊಳ್ಳೋದು ಕಾಮನ್. ಆದರೆ, ಹಾರ್ದಿಕ್ ಪಾಂಡ್ಯ ಮಗು ಪಡೆದ ನಂತರ ಮದುವೆ ಆಗಿದ್ದಾರೆ. ಈ ವಿಚಾರದಲ್ಲಿ ಅನೇಕರನ್ನು ಅವರನ್ನು ಟ್ರೋಲ್ ಕೂಡ ಮಾಡಿದ್ದಾರೆ.
ನತಾಶಾ ಅವರು ಬಾಲಿವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.
ಈ ಮದುವೆ ಎರಡು ರೀತಿಯಲ್ಲಿ ನಡೆದಿದೆ ಎನ್ನಲಾಗಿದೆ. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದು ಬಳಿಕ, ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದಾರೆ.
Published On - 7:51 am, Wed, 15 February 23