
ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಮದುವೆ ಇತ್ತೀಚೆಗೆ ನೆರವೇರಿತ್ತು. ಈಗ ಈ ಜೋಡಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದೆ.

ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರು ಈಗ ಹಿಂದೂ ಸಂಪ್ರದಾಯದ ಪ್ರಕಾರ ನಡೆದ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

ನತಾಶಾ ಅವರು ಬಾಲಿವುಡ್ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಅಲಭ್ಯತೆಯಲ್ಲಿ ಟೀಂ ಇಂಡಿಯಾದ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.