ಎರಡನೇ ಬಾರಿ ತಾಯಿ ಆಗುತ್ತಿದ್ದಾರೆ ಹರ್ಷಿಕಾ; ಗುಡ್ ನ್ಯೂಸ್ ಹೇಳಿದ ಭುವನ್

Updated on: Mar 31, 2026 | 10:55 AM

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹರ್ಷಿಕಾ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಧಿಕೃತ ಮಾಡಲಾಗಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಅವರ ಫೋಟೋ ಗಮನ ಸೆಳೆದಿದೆ.

1 / 5
ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು 2024ರ ಅಕ್ಟೋಬರ್​ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿಗೆ ತ್ರಿದೇವಿ ಎಂದು ಹೆಸರು ಇಟ್ಟಿದ್ದರು. ಈಗ ಇವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ.

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು 2024ರ ಅಕ್ಟೋಬರ್​ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿಗೆ ತ್ರಿದೇವಿ ಎಂದು ಹೆಸರು ಇಟ್ಟಿದ್ದರು. ಈಗ ಇವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ.

2 / 5

ಪ್ಯಾರಿಸ್ ಐಫಿಲ್ ಟವರ್ ಎದುರು ನಿಂತು ಹರ್ಷಿಕಾ ಹಾಗೂ ಭುವನ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮೊದಲ ಮಗಳು ಕೂಡ ಇದ್ದಾಳೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಹರ್ಷಿಕಾ-ಭುವನ್ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

3 / 5

‘ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಮನಸ್ಸು ತುಂಬಿವೆ ಮತ್ತು ಸ್ಕ್ರಿಪ್ಟ್ ಪರಿಪೂರ್ಣವಾಗಿ ಕಾಣುತ್ತದೆ. ಧನ್ಯವಾದಗಳು’ ಎಂದು ಭುವನ್ ಬರೆದುಕೊಂಡಿದ್ದಾರೆ.

4 / 5

ಭುವನ್ ಹಾಗೂ ಹರ್ಷಿಕಾಗೆ ದೇವರ ಮೇಲೆ ಅಪಾರ ಭಕ್ತಿ. ಅವರು ಆಗಾಗ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಅವರು ಈಗ ಮತ್ತಷ್ಟು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.

5 / 5

ಹರ್ಷಿಕಾ ಹಾಗೂ ಭುವನ್ ಇಬ್ಬರೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಹರ್ಷಿಕಾ ‘ಚಿ. ಸೌಜನ್ಯ’ ಹೆಸರಿನ ಸಿನಿಮಾ ಅನೌನ್ಸ್ ಮಾಡಿದ್ದರು. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇದೆ. ಈ ಸಿನಿಮಾ ಯಾವ ಹಂತದಲ್ಲಿದೆ ಎಂಬ ಕುತೂಹಲ ಮೂಡಿದೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us