ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ, ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಹಾಸನಾಂಬೆ ನೋಡುವ ಭಾಗ್ಯ ಮತ್ತೆ ಕೂಡಿ ಬಂದಿದೆ. ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್.ರಾಜಣ್ಣ ಉಪಸ್ಥಿತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಪರಾಹ್ನ 12 ಗಂಟೆ 23 ನಿಮಿಷ ಕ್ಕೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಮಾಡಲಾಗಿದೆ.