- TV9 Kannada Photo gallery Hassan Landslide: Bengaluru-Mangaluru, Murudeshwar train cancel Kannada News
ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ
ಈ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಇದಾದ ಬಳಿಕ ಈಗ ಮತ್ತೆ ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂಕುಸಿತವಾಗಿದೆ. ಇದರಿಂದ ಬೆಂಗಳೂರಿನಿಂದ ಮಂಗಳೂರು ಮತ್ತು ಮುರುಡೇಶ್ವರ ರೈಲು ಸಂಪರ್ಕ ಬಂದ್ ಆಗಿದೆ.
Updated on:Aug 10, 2024 | 1:01 PM

ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ.

ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ.

ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದೆ. ರೈಲುಗಳು ದಿಢೀರ್ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿತು.

ರೈಲುಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲು ಬಿಟ್ಟು ಬಸ್ಗಳತ್ತ ಮುಖ ಮಾಡಿದ್ದಾರೆ. ಬಸ್ನಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಈ ಸಂದರ್ಭದಲ್ಲೂ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದಾಗಿತ್ತು.
Published On - 10:06 am, Sat, 10 August 24

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.
Read More



