ಹಾಸನ: ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

Edited By:

Updated on: Jul 30, 2024 | 10:18 AM

ಹಾಸನ, ಜುಲೈ 30: ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್​ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

1 / 5
ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್​​ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.

ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್​​ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.

2 / 5

ಹಾಸನ ಹಾಸನ ಜಿಲ್ಲೆಯ ಹಲವೆಡೆ ಸೋಮವಾರ ಸಂಜೆಯಿಂದಲೇ ಭಾರೀ‌ ಮಳೆಯಾಗುತ್ತಿದೆ. ಆದರೂ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿಲ್ಲ. ಸಕಲೇಶಪುರ ತಾಲ್ಲೂಕಿನ ಹಲವು ಕಡೆ ಸಂಪರ್ಕ ಕಡಿತಗೊಂಡಿದೆ.

3 / 5

ಸಕಲೇಶಪುರ ತಾಲ್ಲೂಕಿನ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿ ಅವಾಂತರ ಸೃಷ್ಟಿಯಾಗಿದೆ. ದಾರಿಗಳೇ ಜಲಾವೃತವಾಗಿ ಜನರ ಆತಂಕ ಹೆಚ್ಚಾಗಿದೆ. ಜನರ ಪರದಾಟದ ನಡುವೆಯೂ ಜಿಲ್ಲಾಡಳಿತ ರಜೆ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ. ಭಾರಿ ಮಳೆಯ ನಡುವೆ ಶಾಲೆಗಳಿಗೆ ತೆರಳಲು ವಿದ್ಯಾರ್ಥಿಗಳು, ಶಿಕ್ಷಕರು ಪರದಾಡುವಂತಾಗಿದೆ.

4 / 5

ಹಾಸನ ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಬಿ ಹರಿಯುತ್ತಿರುವ ನದಿ ತೊರೆಗಳನ್ನು ಹಾದುಕೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಹೋಗಬೇಕಾಗಿದೆ.

5 / 5

ಮಳೆಗೆ ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಮುಳುಗಡೆ ಹಿನ್ನೆಲೆ ಕೆಲ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us